ವಿಚ್ಛೇದನ ವಿಚಾರಕ್ಕೆ ಪತ್ನಿಯನ್ನೇ ಕತ್ತು ಸೀಳಿ ಕೊಂದ ಪತಿ

Published : Jun 02, 2017, 08:33 AM ISTUpdated : Apr 11, 2018, 12:48 PM IST
ವಿಚ್ಛೇದನ ವಿಚಾರಕ್ಕೆ ಪತ್ನಿಯನ್ನೇ ಕತ್ತು ಸೀಳಿ ಕೊಂದ ಪತಿ

ಸಾರಾಂಶ

ವಿಚ್ಛೇದನ ವಿಚಾರಕ್ಕೆ ಸಂಬಂಧಿಸಿದಂತೆ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. 45 ವರ್ಷದ ಮಂಜುಳಾ ಕೊಲೆಯಾದ ದುರ್ದೈವಿಯಾಗಿದ್ದು, ಪತಿ ಮೈಲಾರಯ್ಯನೇ ಮಚ್ಚಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ

ಬೆಂಗಳೂರು(ಜೂ.02): ವಿಚ್ಛೇದನ ವಿಚಾರಕ್ಕೆ ಸಂಬಂಧಿಸಿದಂತೆ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. 45 ವರ್ಷದ ಮಂಜುಳಾ ಕೊಲೆಯಾದ ದುರ್ದೈವಿಯಾಗಿದ್ದು, ಪತಿ ಮೈಲಾರಯ್ಯನೇ ಮಚ್ಚಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ವಿಚ್ಛೇದನ ವಿಚಾರವಾಗಿ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಈ ವಿಚಾರವಾಗಿ ನಿನ್ನೆ ರಾತ್ರಿ 9.30 ಸುಮಾರಿಗೆ ಜಗಳವಾಗಿದೆ. ಈ ಸಮಯದಲ್ಲಿ ಮಕ್ಕಳಾದ ಈಶ್ವರ್ ಮತ್ತು ಗಗನ್ ತಂದೆಗೆ ಬೈದು ಮನೆ ಬಿಟ್ಟು ಹೋಗುವಂತೆ ಸೂಚಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮೈಲಾರಯ್ಯ ಮಂಜುಳಾ ರೂಮಿಗೆ ಪ್ರವೇಶಿಸಿ ಅಲ್ಲೇ ಇದ್ದ ಮಚ್ಚಿನಿಂದ ಕತ್ತು ಸೀಳಿ ಹೊರ ಬಂದಿದ್ದಾನೆ. ಮಚ್ಚಿನ ಹೊಡೆತಕ್ಕೆ ಸ್ಥಳದಲ್ಲಿಯೇ ಕುಸಿದು ಬಿದ್ದ ಮಂಜುಳಾ ಕೊನೆ ಉಸಿರೆಳೆದಿದ್ದಾಳೆ.

ಇದನ್ನು ಕಂಡ ಮಕ್ಕಳು ತಂದೆಯನ್ನು ಹಿಗ್ಗಾ ಮುಗ್ಗಾ ತಳಿಸಿ ಪೊಲೀಸ್​'ಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಇಂದಿರಾ ನಗರ ಆರೋಪಿ ಮೈಲಾರಯ್ಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?