
ವಿಜಯಪುರ(ನ.13): ಪತ್ನಿಯನ್ನು ಪ್ರೀತಿಸಿ ಕಾಪಾಡಬೇಕಾದ ಪತಿಯೇ ತನ್ನ ನಾಲ್ಕು ತಿಂಗಳ ಗರ್ಭಿಣಿ ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ವಿಜಯಪುರದ ಕಸ್ತೂರ ಬಾ ಕಾಲೋನಿಯಲ್ಲಿ ನಡೆದಿದೆ.
ಯಮನವ್ವ ಪರಸಪ್ಪ ಪಾನಪಟ್ಟಿ ಎಂಬಾಕೆಯೇ ಬೆಂಕಿಯಲ್ಲಿ ಬೆಂದು ಜೀವನ್ಮರಣ ಸ್ಥಿತಿಯಲ್ಲಿರುವ ದುರ್ದೈವಿ. ಈಕೆಯ ಪತಿ ಪರಸಪ್ಪ ತನ್ನ ಹೆಂಡತಿಯ ಮೇಲೆ ಸೀಮೆ ಎಣ್ಣಿ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಗಾಯಾಳು ಯಮನವ್ವನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದು, ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.