ರಾಸಲೀಲೆ ವಿಡಿಯೋ ಬಹಿರಂಗವಾದರೂ ತಾನು ಅಮಾಯಕ ಎಂದು ಹೇಳಿದ ಹೆಚ್.ವೈ.ಮೇಟಿ

Published : Dec 14, 2016, 07:50 AM ISTUpdated : Apr 11, 2018, 12:55 PM IST
ರಾಸಲೀಲೆ ವಿಡಿಯೋ ಬಹಿರಂಗವಾದರೂ ತಾನು ಅಮಾಯಕ ಎಂದು ಹೇಳಿದ ಹೆಚ್.ವೈ.ಮೇಟಿ

ಸಾರಾಂಶ

ಈ ಪ್ರಕರಣದಲ್ಲಿ ತನ್ನದೇನೂ ತಪ್ಪಿಲ್ಲ. ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದೂ ಮೇಟಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು(ಡಿ. 14): ಮಾಧ್ಯಮಗಳಲ್ಲಿ ತಮ್ಮ ರಾಸಲೀಲೆ ವಿಡಿಯೋ ಬಹಿರಂಗವಾದರೂ ಅಬಕಾರಿ ಸಚಿವ ಹೆಚ್.ವೈ.ಮೇಟಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. "ಮಾಧ್ಯಮಗಳಲ್ಲಿ ಬಹಿರಂಗವಾಗಿದೆಯಷ್ಟೇ. ಅದರಲ್ಲಿ ಸತ್ಯಾಂಶವಿಲ್ಲ. ಸಿಎಂಗೆ ಮುಜುಗರವಾಗಬಾರದು ಎಂಬ ನಿಟ್ಟಿನಲ್ಲಿ ನಾನು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ," ಎಂದು ಮಾಧ್ಯಮಗಳೆದುರು ಹೆಚ್.ವೈ.ಮೇಟಿ ಪ್ರತಿಕ್ರಿಯಿಸಿದ್ದಾರೆ.

ಈ ಪ್ರಕರಣದಲ್ಲಿ ತನ್ನದೇನೂ ತಪ್ಪಿಲ್ಲ. ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದೂ ಮೇಟಿ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳಲ್ಲಿ ಇಂದು ಮೇಟಿ ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಮೇಟಿಯವರು ಸಿಎಂ ಅವರನ್ನು ಖುದ್ದಾಗಿ ಭೇಟಿ ಮಾಡಿದ್ದರು. ಈ ವೇಳೆ, ಮುಖ್ಯಮಂತ್ರಿಗಳು ಕ್ರುದ್ಧಗೊಂಡು ಮೇಟಿಯವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಿಜೆಪಿ ವಿರುದ್ಧ ಮಾತನಾಡು ನೈತಿಕತೆ ಇಲ್ಲದಂತೆ ಮಾಡಿದ್ದೀರಿ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿರುವುದು ವರದಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!