ಹೈದರಾಬಾದ್ ಕರ್ನಾಟಕಕ್ಕೆ ಹೊಸ ಹೆಸರು ನಾಮಕರಣ ಮಾಡಿದ ರಾಜ್ಯ ಸರ್ಕಾರ| ಹೈದರಾಬಾದ್ ಕರ್ನಾಟಕ ಬದಲು ಕಲ್ಯಾಣ ಕರ್ನಾಟಕ ಎಂದು ನಾಮಕರಣ|ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ.
ಬೆಂಗಳೂರು, (ಸೆ.06): ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.
undefined
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಇನ್ನು ಮುಂದೆ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಯು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡಲಾಗಿದೆ. ಅಲ್ಲಿನ ಜನರು ಮತ್ತು ಜನಪ್ರತಿನಿಧಿಗಳ ಒತ್ತಾಯದಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.
ಇನ್ನು ಮುಂದೆ ಎಲ್ಲಾ ರಾಜ್ಯ ಸರ್ಕಾರಿ ದಾಖಲೆಗಳಲ್ಲೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ನಮೂದಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಹೈದರಾಬಾದ್-ಕರ್ನಾಟಕದ ವ್ಯಾಪ್ತಿಗೆ ಬರುವ ಜಿಲ್ಲೆಗಳಿಗೆ 371ಜೆ ಅಡಿ ವಿಶೇಷ ಸ್ಥಾನಮಾನ ಸಿಗುತ್ತಿದೆ. ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಸೇರುತ್ತವೆ.