
ನವದೆಹಲಿ (ಅ.04): ‘ನಾನು ಜನರಿಂದ ಚುನಾಯಿತನಾದ ಮುಖ್ಯಮಂತ್ರಿ, ಭಯೋತ್ಪಾದಕನಲ್ಲ’ ಹೀಗೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿಧಾನಸಭೆಯಲ್ಲಿ ಹೇಳಿರುವ ಪ್ರಸಂಗ ನಡೆದಿದೆ. ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವ ಮಸೂದೆಯನ್ನು ಮಂಡಿಸಿದಾಗ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ವಿರೋಧಿಸಿದಾಗ, ನಾನು ಸಿಎಂ, ಭಯೋತ್ಪಾದಕನಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ಲೆಫ್ಟಿನೆಂಟ್ ಗವರ್ನರ್, ಬಿಜೆಪಿ ಹಾಗೂ ಅಧಿಕಾರಿಗಳ ವಿರುದ್ಧ ಕೇಜ್ರಿವಾಲ್ ಕಿಡಿ ಕಾರಿದ್ದಾರೆ. ಇದರಿಂದ ಸಿಟ್ಟುಗೊಂಡ ಪ್ರತಿಪಕ್ಷ ನಾಯಕರು ವಿಧಾನಸಭೆಯಿಂದ ಹೊರ ಹೋಗಿದ್ದಾರೆ. ನಾವು ದೆಹಲಿ ಆಡಳಿತ ನಡೆಸುವವರು, ಅಧಿಕಾರಿಗಳಲ್ಲ ಎಂದಾಗ ಆಮ್ ಆದ್ಮಿ ಪಕ್ಷದ ಶಾಸಕರು ಜೋರಾಗಿ ಚಪ್ಪಾಳೆ ತಟ್ಟಿದರು.
ಸುಮಾರು 15 ಸಾವಿರ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಇದಕ್ಕೆ ಅನುಮೋದನೆ ಸಿಕ್ಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.