
ಬೆಂಗಳೂರು(ಮೇ.03): ನನಗೆ ಕಂಪ್ಯೂಟರ್ ಆಪರೇಟ್ ಮಾಡೋದು ಗೊತ್ತಿಲ್ಲಾ, ನಾನು ಕಂಪ್ಯೂಟರ್ ಕಲಿಯಕ್ಕೂ ಹೋಗಲಿಲ್ಲ ಅಲ್ಲದೆ ಹಣಕಾಸು ಮಂತ್ರಿಯಾದ ಸಂದರ್ಭದಲ್ಲೂ ಕಲಿಯಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸಾರ್ವಜನಿಕರಿಗೆ ರಕ್ಷಣೆ ನೀಡುವ ಸಲುವಾಗಿ ರೂಪುಗೊಂಡಿರುವ ‘ಐ-ವಿವೇಕ’ ವೆಬ್ಸೈಟ್ ಅನಾವರಣಗೊಳಿಸಿ ಮಾತನಾಡಿದರು. ಸಂಸ್ಥೆಗಳು ಜನರಿಗೆ ವಂಚನೆ ಮಾಡುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇಂತಹ ಸಂಸ್ಥೆಗಳ ವಿರುದ್ಧ ವೆಬ್ಸೈಟ್ನಲ್ಲಿ ದೂರು ದಾಖಲಿಸಬಹುದು ಎಂದರು.
ಗೃಹ ಸಚಿವ ಪರಮೇಶ್ವರ್, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಠಿಯಾ ಸೇರಿದಂತೆ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.