
ಬೆಂಗಳೂರು(ಏ.28): ರಾಷ್ಟ್ರಪತಿ ಚುನಾವಣೆ ಇನ್ನೇನು ಹತ್ತಿರವಾಗುತ್ತಿದೆ. ಪ್ರಸ್ತುತ ರಾಷ್ಟ್ರಪತಿಯಾಗಿರುವ ಪ್ರಣಬ್ ಮುಖರ್ಜಿ ಅವರ ಅವಧಿ ಜುಲೈ 25ಕ್ಕೆ ಮುಕ್ತಾಯಗೊಳ್ಳಲಿದೆ.
ಈಗಾಗಲೇ ರೇಸ್'ನಲ್ಲಿ ಹಲವರಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರಕ್ಕೆ ಬಹುಮತವಿರುವುದರಿಂದ ಅವರು ಅಂತಿಮಗೊಳಿಸಿದ ಅಭ್ಯರ್ಥಿಯೇ ರಾಷ್ಟ್ರದ ಮೊದಲ ಪ್ರಜೆಯಾಗಲಿದ್ದಾರೆ. ಈ ನಡುವೆ ವಿರೋಧ ಪಕ್ಷ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸುತ್ತಿದ್ದಾರೆ. ಇದಕ್ಕೆ ಕನ್ನಡಿಗರು ಹೊರತೇನಲ್ಲ.
ಈ ಹೊತ್ತಿನಲ್ಲಿ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೆಸರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಸ್ವತಃ ಅವರೇ ತಮ್ಮ ಅಭಿಪ್ರಾಯ ಮಂಡಿಸಿದ್ದು, ಎಂದು ತಾನು ಅಭ್ಯರ್ಥಿಯಲ್ಲ' ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.