
ನವದೆಹಲಿ[ಏ.29]: ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದ್ದು ಮಾಡುವ ಕಾಂಗ್ರೆಸ್‌ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, 2019ರ ಲೋಕಸಭಾ ಚುನಾವಣೆ ವೇಳೆ ಸುದ್ದಿಯಾಗಿದ್ದು ಕಡಿಮೆ. ಹೀಗಾಗಿ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಭಾರತ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಸತ್ತಿದ್ದಾರೆ ಎಂಬ ಟ್ರೋಲ್ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ.
ತಮ್ಮ ಕುರಿತಾದ ಈ ಟ್ರೋಲ್‌ಗೆ ಪ್ರತಿಕ್ರಿಯೆ ನೀಡಿರುವ ಅಯ್ಯರ್, ತಾನಿನ್ನೂ ಗಟ್ಟಿಮುಟ್ಟಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮವೊಂದರ ಜೊತೆ ಮಾತನಾಡಿದ ಅಯ್ಯರ್ ಅವರು, ‘ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಸಾವನ್ನಪ್ಪಿದ್ದೇನೆ ಎಂಬುದೂ ಸೇರಿದಂತೆ ನನ್ನ ಸಾವಿನ ಕುರಿತ ಹಲವು ವದಂತಿ ಕೇಳಿದ್ದೇನೆ. ಆದರೆ, ನಾನು ಸತ್ತಿದ್ದೇನೆ ಎಂದು ಭಾವಿಸುವವರಿಗೆ ನಾನಿನ್ನೂ ಬದುಕಿದ್ದೇನೆ ಎಂಬುದನ್ನು ತಿಳಿಸಲು ವಿಷಾದಿಸುತ್ತೇನೆ,’ ಎಂದು ತಾವು ಸತ್ತಿದ್ದೇನೆಂಬ ವಿಚಾರವನ್ನು ವೈರಲ್ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
2014ರ ಲೋಕಸಭಾ ಹಾಗೂ 2017ರ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಾಯ್‌ವಾಲಾ ಹಾಗೂ ನೀಚ ಎಂದು ಸಂಬೋಧಿಸುವ ಮೂಲಕ ಮಣಿಶಂಕರ್ ಅಯ್ಯರ್ ಅವರು ವಿವಾದದ ಕೇಂದ್ರಬಿಂದುವಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.