
ಬೆಂಗಳೂರು [ಆ.29]: ‘ನಾನು ಪಕ್ಷದಲ್ಲಿ ಉನ್ನತ ಹುದ್ದೆ ಅಲಂಕರಿಸಬೇಕೆಂದು ನನ್ನ ಹಣೆಬರಹದಲ್ಲಿ ಬರೆದಿದ್ದರೆ ಸಮಯ ಬಂದಾಗ ಅವಕಾಶ ತಾನಾಗೇ ಹುಡುಕಿಕೊಂಡು ಬರುತ್ತದೆ. ಅದನ್ನು ಯಾರಿಂದಲೂ ತಪ್ಪಿಸಲಾಗಲ್ಲ. ಹಣೆಬರಹ, ಅದೃಷ್ಟದ ಮೇಲೆ ನನಗೆ ನಂಬಿಕೆ ಇದೆ.’ ಹೀಗೆ ಹೇಳುವ ಮೂಲಕ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ತಾವು ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಲಾಬಿ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.
ಸದಾಶಿವ ನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣೆಬರಹದಲ್ಲಿ ಬರೆದಿದ್ದರೆ ಎಲ್ಲವೂ ತಾನಾಗೇ ಹುಡಿಕಿಕೊಂಡು ಬರುತ್ತದೆ.
ರಾಜ್ಯ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಉದಾಹರಣೆಗೆ ಬಿಜೆಪಿಯ ಲಕ್ಷ್ಮಣ ಸವದಿ ಅವರನ್ನೇ ತೆಗೆದುಕೊಳ್ಳಿ. ಚುನಾವಣೆಯಲ್ಲಿ ಸೋತಿದ್ದರೂ ಅವರ ಹಣೆಯಲ್ಲಿ ಸಚಿವ, ಉಪಮುಖ್ಯಮಂತ್ರಿ ಆಗಬೇಕೆಂದಿತ್ತು. ಅದರಂತೆ ಆ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅದು ಏನಾದರೂ ಇರಲಿ ನಾನು ಅವರನ್ನು ಅಭಿನಂದಿಸುತ್ತೇನೆ.
ಹಾಗೆಯೇ ನನ್ನ ಹಣೆಯಲ್ಲೂ ಬರೆದಿದ್ದರೆ ನಾನು ಕೂಡ ಪಕ್ಷದ ಉನ್ನತ ಹುದ್ದೆ ಅಲಂಕರಿಸುತ್ತೇವೆ. ಆ ಸಮಯ ಬಂದಾಗ ಆ ಅವಕಾಶ ತಾನಾಗೇ ಬರುತ್ತದೆ. ಅದನ್ನು ಯಾರಿಂದಲೂ ತಪ್ಪಿಸಲಾಗುವುದಿಲ್ಲ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.