
ಬೆಳಗಾವಿ : ನನಗೆ ಕೆಪಿಸಿಸಿ ಅಧ್ಯಕ್ಷನಾಗುವ ಅವಕಾಶ ಸಿಕ್ಕಿತ್ತು. ನನಗೆ ಆ ಅರ್ಹತೆ ಇದ್ದರೂ ಸದ್ಯ ಆ ಸ್ಥಾನ ಬೇಡವೇ ಬೇಡ ಎಂದು ನಿರಾಕರಿಸಿದ್ದೇನೆ ಎಂದು ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಯಾರೇ ಪಕ್ಷದ ರಾಜ್ಯಾಧ್ಯಕ್ಷರಾದರೂ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು. ಇದೇವೇಳೆ ಕೆಪಿಸಿಸಿ ಅಧ್ಯಕ್ಷರಿಗೆ ಐದು ವರ್ಷಗಳ ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಯೊಂದು ವಿಚಾರದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದೆ. ಆದರೆ ಇನ್ನೂ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಬೇಡಿಕೆಗೆ ಕಾಲ ಪಕ್ವ ಆಗಿಲ್ಲ. ಹೀಗಾಗಿರುವುದಕ್ಕೆ ಸೂಕ್ತ ನಾಯಕತ್ವ ಕೊರತೆಯೇ ಪ್ರಮುಖ ಕಾರಣವಾಗಿದ್ದು, ಸಂಸದ ಮಲ್ಲಿಕಾರ್ಜುನ ಖರ್ಗೆ ರೀತಿಯಲ್ಲೇ ಅನೇಕರು ಬೆಳೆದರೆ ಅನ್ಯಾಯ ಸರಿಪಡಿಸಲು ಸಾಧ್ಯವಾಗುತ್ತದೆ ಎಂದರು.
ಇದೇ ವೇಳೆ ನಿಗಮ ಮಂಡಳಿಗಳ ನೇಮಕಕ್ಕೆ ಅರ್ಹ ಆಕಾಂಕ್ಷಿಗಳಾದ ನನ್ನ ಬೆಂಬಲಿಗರ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ರಾಜ್ಯಉಸ್ತುವಾರಿ ವೇಣುಗೋಪಾಲ ಅವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.