ನೊಂದು ರಾಜ್ಯದ ಜನತೆಯ ಬಳಿ ಕ್ಷಮೆ ಕೇಳಿದ ಜಮೀರ್ ಅಹ್ಮದ್

Published : Jun 09, 2018, 12:41 PM ISTUpdated : Jun 09, 2018, 12:52 PM IST
ನೊಂದು ರಾಜ್ಯದ ಜನತೆಯ ಬಳಿ ಕ್ಷಮೆ ಕೇಳಿದ ಜಮೀರ್ ಅಹ್ಮದ್

ಸಾರಾಂಶ

ಕರ್ನಾಟಕದ ನೂತನ ಸಚಿವ ಜಮೀರ್ ಅಹ್ಮದ್ ಅವರು ತಮಗೆ ಸಿಕ್ಕ ಖಾತೆಯ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ತಮಗೆ ದೊರಕಿರುವುದು ಸಂತೋಷವಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಇದೇ ವೇಳೆ ಅವರು ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಗ್ಗೆ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ. 

ಬೆಂಗಳೂರು :  ಕರ್ನಾಟಕದ ನೂತನ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮಗೆ ಸಿಕ್ಕ ಖಾತೆಯ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ತಮಗೆ ದೊರಕಿರುವುದು ಸಂತೋಷವಾಗಿದೆ ಎಂದು ಹೇಳಿದ್ದಾರೆ. 

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು ತಮಗೆ ಯಾವ ಖಾತೆ ಕೊಟ್ಟರೂ ಕೂಡ ಉತ್ತಮವಾಗಿ ನಿಭಾಯಿಸುತ್ತೇನೆ. ಆದರೆ ಸದ್ಯ ಈ ಖಾತೆಯಲ್ಲಿ ತಮಗೆ ಯಾವುದೇ ಅನು ಭವವಿಲ್ಲ. ಆದರೆ ಈ ಖಾತೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಇತಿಹಾಸ ಸೃಷ್ಟಿಯಾಗುವಂತೆ ಕಾರ್ಯನಿರ್ವಹಿಸುವುದಾಗಿ ಅವರು ಈ  ವೇಳೆ ಭರವಸೆ  ನೀಡಿದ್ದಾರೆ. 

ಅಲ್ಲದೇ ಸಮ್ಮಿಶ್ರ ಸರ್ಕಾರದಲ್ಲಿ ದೇವೇಗೌಡರ ಮಾತನ್ನು ಕೇಳುವುದರಲ್ಲಿ ಯಾವುದೇ ರೀತಿಯ ತಪ್ಪಿಲ್ಲ. ರಾಜ್ಯದಲ್ಲಿ ಸಮಸ್ಯೆ ಇದ್ದಾಗ ಅವರ ಮಾತು ಕೇಳಬೇಕು. ಅವರೋರ್ವ ಮಾಜಿ ಪ್ರಧಾನಿ. ಖಾತೆ ಹಂಚಿಕೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಬ್ಬರೂ ಕೂಡ ಯಾವುದೇ ಪ್ರಭಾವ ಬೀರಿಲ್ಲ ಎಂದು ಅವರು ಹೇಳಿದ್ದಾರೆ. 

ಇಂಗ್ಲೀಷಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ‌ ವಿಚಾರಕ್ಕೆ ಕ್ಷಮೆ : ಇನ್ನು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜಮೀರ್ ಅಹ್ಮದ್ ಅವರು ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಈ ಸಂಬಂಧ  ಮಾತನಾಡಿದ ಅವರು ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. 

ಕನ್ನಡ ಕಲಿಯದೇ ಇದ್ದಿದ್ದು ನನ್ನ ದುರಾದೃಷ್ಟ.  ತಂದೆ ತಾಯಿ ನನಗೆ ಕನ್ನಡ ಶಾಲೆಗೆ ಹಾಕಿಲ್ಲ. ಹಾಗಾಗಿ ಕನ್ನಡ ಓದು‌ ಸರಿಯಾಗಿ ಬಾರದ ಕಾರಣ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದೆ.  ಈ ಬಗ್ಗೆ ರಾಜ್ಯದ ಜನತೆಗಿಂತ ದುಪ್ಪಟ್ಟು ನೋವು ನನಗಾಗಿದೆ. ನಾನು ಬೇಕಂತಲೇ ಇಂಗ್ಲೀಷ್ ಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರೆ ನನಗೆ ಗಲ್ಲು ಶಿಕ್ಷೆ ಕೊಡಲಿ. 

ಉದ್ದೇಶಪೂರ್ವಕವಾಗಿ ನಾನು ಈ ತಪ್ಪು ಮಾಡಿದ್ದಲ್ಲಿ ನನ್ನನ್ನು ದೇಶ ದ್ರೋಹಿ ಎಂದು ಕರೆಯಲಿ ಎಂದು ಸಿದ್ಧಗಂಗಾ ಮಠದಲ್ಲಿ ಜಮೀರ್ ಅಹಮದ್  ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ