ಸಮ್ಮಿಶ್ರ ಸರ್ಕಾರಕ್ಕೆ ನಾನೇ ಟ್ರಬಲ್‌ ಶೂಟರ್‌

By Web DeskFirst Published Oct 1, 2018, 10:43 AM IST
Highlights

ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿ ನಡೆಯಲಿದೆ. ಈ ಸರ್ಕಾರ ಟ್ರಬಲ್ ಶೂಟರ್‌ ನಾನೇ. ಆದ್ದರಿಂದ ಸಮ್ಮಿಶ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ನನ್ನ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರೋದು ಎಂದು ಅವರು ಸಿದ್ದರಾಮಯ್ಯ ಹೇಳಿದ್ದಾರೆ.


ಮೈಸೂರು :  ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಟ್ರಬಲ್‌ ಶೂಟರ್‌ ನಾನೇ. ಹಾಗಾಗಿಯೇ ನನ್ನನ್ನು ಸಮನ್ವಯ ಸಮಿತಿ ಅಧ್ಯಕ್ಷನನ್ನಾಗಿ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ 5 ವರ್ಷ ಸುಭದ್ರವಾಗಿ ನಡೆಯಲಿದೆ. ಈ ಸರ್ಕಾರ ಟ್ರಬಲ್ ಶೂಟರ್‌ ನಾನೇ. ಆದ್ದರಿಂದ ಸಮ್ಮಿಶ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ನನ್ನ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರೋದು ಎಂದು ಅವರು ಹೇಳಿದರು. ಅಗತ್ಯವಿದ್ದರೆ ಮಾತ್ರ ಸಮನ್ವಯ ಸಮಿತಿ ಸಭೆ ನಡೆಯಲಿದ್ದು ಈವರೆಗೆ ಮೂರು ಬಾರಿ ಮಾತ್ರವಷ್ಟೇ ಸಭೆ ನಡೆದಿದೆ ಎಂದರು.

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಧ್ಯಮಗಳ ಸೃಷ್ಟಿಯೇ ಹೊರತು ಯಾವೊಬ್ಬ ಶಾಸಕನೂ ಸರ್ಕಾರ ಅಸ್ಥಿರಗೊಳಿಸಲು ಕೈ ಹಾಕಿಲ್ಲ. ರಾಜ್ಯಾದ್ಯಂತ ಸಮ್ಮಿಶ್ರ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ರೈತರ ಸಾಲಮನ್ನಾ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ ಎಂದರು. ಇದೇವೇಳೆ ಅ.3ರ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಪುನರುಚ್ಚರಿಸಿದರು.

click me!