
ನವದೆಹಲಿ (ಏ.19): ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ನಾಯಕರಾದ ಅಡ್ವಾಣಿ, ಉಮಾಭಾರತಿ ಸೇರಿದಂತೆ 12 ಮಂದಿ ಪಿತೂರಿ ನಡೆಸಿದ್ದಾರೆ ಎನ್ನುವ ಪ್ರಕರಣದ ಮರುವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಅಯೋಧ್ಯೆಗೆ ತೆರಳಿ ರಾಮನಿಗೆ ತಮ್ಮ ಸಂತುಷ್ಟಿ, ಸಮಾಧಾನವನ್ನು ಅರ್ಪಿಸುವುದಾಗಿ ಬಿಜೆಪಿ ಹಿರಿಯ ನಾಯಕಿ, ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಹೇಳಿದ್ದಾರೆ.
ಸುಪ್ರೀಂಕೋರ್ಟ್ ತೀರ್ಮಾನ ಹೊರಬಿದ್ದ ಬಳಿಕ ಕಾಂಗ್ರೆಸ್ ಪಕ್ಷ, ುಮಾ ಭಾರತಿ ಮತ್ತು ಮುರಳಿ ಮನೋಹರ್ ಜೋಷಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಈ ಮೂಲಕ ವರ ಹುದ್ದೆಯ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಉಮಾಭಾರತಿ, ತುರ್ತು ಪರಿಸ್ಥಿತಿಯನ್ನು ಹೇರಿದ್ದ ಪಕ್ಷಕ್ಕೆ ನನ್ನ ರಾಜಿನಾಮೆ ಕೇಳುವ ಹಕ್ಕಿಲ್ಲವೆಂದು ತಿರುಗೇಟು ನೀಡಿದ್ದಾರೆ.
ಬಾಬ್ರಿ ಮಸೀದಿ ಪ್ರಕರಣದಲ್ಲಿ ಯಾವುದೇ ಪಿತೂರಿ ನಡೆದಿಲ್ಲ. ಎಲ್ಲವನ್ನೂ ಖುಲ್ಲಂಖುಲ್ಲವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಾಬ್ರಿ ಮಸೀದಿ ಪಿತೂರಿ ಪ್ರಕರಣದ ಮರು ವಿಚಾರಣೆ ನಡೆಸಬೇಕೆಂದು ಸಿಬಿಐ ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಸ್ತುತ ರಾಜಸ್ಥಾನ ರಾಜ್ಯಪಾಲರಾಗಿರುವ ಕಲ್ಯಾಣ್ ಸಿಂಗ್ ವಿರುದ್ಧ ಕೈಗೆತ್ತಿಕೊಳ್ಳಲಾಗುವುದಿಲ್ಲ. ಎಂದು ನ್ಯಾಯಾಲಯ ಹೇಳಿದೆ. ಇದೇ ಸಂದರ್ಭದಲ್ಲಿ ಗಂಗಾ, ಅಯೋಧ್ಯಾ, ತಿರಂಗಕ್ಕಾಗಿ ಯಾವುದೇ ಶಿಕ್ಷೆ ಸ್ವೀಕರಿಸಲು ಸಿದ್ಧವೆಂದು ಉಮಾಭಾರತಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.