ಬಿಜೆಪಿ ಶಾಸಕ ಜೆಡಿಎಸ್ ಸೇರ್ತಾರಾ..?

Published : Sep 14, 2018, 04:02 PM ISTUpdated : Sep 19, 2018, 09:25 AM IST
ಬಿಜೆಪಿ ಶಾಸಕ ಜೆಡಿಎಸ್ ಸೇರ್ತಾರಾ..?

ಸಾರಾಂಶ

ಬಿಜೆಪಿ ಮುಖಂಡ ಹಾಗೂ ಶಾಸಕ ಇದೀಗ ಪಕ್ಷವನ್ನು ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಡಿದ್ದು ಈ ಸಂಬಂಧ ಅವರೇ ಸ್ಪಷ್ಟನೆ ನೀಡಿದ್ದಾರೆ. 

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪಅವರನ್ನು ಭೇಟಿ  ಮಾಡಿದ ಬಳಿಕ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಾವು ಜೆಡಿಎಸ್ ಗೆ ಸೇರ್ಪಡೆಯಾಗುತ್ತಿರುವುದು ಶುದ್ಧ ಸುಳ್ಳು ಎಂದು ಹೇಳಿದ್ದಾರೆ. 

ತಾವು ಜೆಡಿಎಸ್ ಗೆ ಹೋಗುವುದಾಗಿ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಬಿ.ಎಸ್ ಯಡಿಯೂರಪ್ಪ ಅವರೂ ಕೂಡ ತಮಗೆ ಹೇಳಿದರು.  ಆದರೆ ನಾನು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತ. ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ. ಬಿಜೆಪಿಯನ್ನು ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ. 

ಅಲ್ಲದೇ ಬಿಜೆಪಿ ಸರ್ಕಾರ ರಚನೆ ಮಾಡುವ ಬಗ್ಗೆ ನನಗೇನೂ ಗೊತ್ತಿಲ್ಲ. ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಆಗ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡಬಹುದು. ಮೊದಲು ಸರ್ಕಾರ ರಚನೆಯಾಗಲಿ. ನಂತರ ಈ ಬಗ್ಗೆ ಚಿಂತನೆ ನಡೆಸೋಣ ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಹೆಚ್ಚುವರಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ
India Latest News Live:ಡಾಲರ್ ಎದುರು ರುಪಾಯಿ ಮೌಲ್ಯ ₹90.32ಕ್ಕೆ ಕುಸಿತ: ಇದು ಸಾರ್ವಕಾಲಿಕ ಕನಿಷ್ಠ