
ಬೆಂಗಳೂರು : ಇನ್ನು ಮುಂದೆ ನಾನು ಯಾವ ಕಾರಣಕ್ಕೂ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಈ ನಿರ್ಧಾರ ಅಚಲ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಿದ ಬಳಿಕ ದೆಹಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕಾರಣ ನನಗೆ ಬೇಡ. ಆದರೆ ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ. ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ ಎಂದರು.
ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿ ಕೊಳ್ಳುವ ನಿರ್ಧಾರವನ್ನು ಸ್ಥಳೀಯ ಘಟಕಗಳಿಗೆ ನೀಡಲಾಗಿದೆ. ಸ್ಥಳೀಯ ನಾಯಕರು ತಮ್ಮಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಜೆಡಿಎಸ್ ಅಥವಾ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.