
ಮಂಡ್ಯ (ಜು. 10): ನಾನು ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಶಾಸಕ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಸದಸ್ಯನಾಗಿದ್ದ ನನಗೆ ಪಕ್ಷ ಶಾಸಕನಾಗೋ ಅವಕಾಶ ಕೊಟ್ಟಿದೆ. ರಾಜ್ಯ ಸರ್ಕಾರದ ಆಡಳಿತ ಗಮನಿಸಿ ವಿರೋಧ ಪಕ್ಷದಲ್ಲೇ ಕುಳಿತು ಹೋರಾಟ ಮಾಡುತ್ತೇನೆ ಎಂದು ಹೇಳಿದರು.
ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದು ನನ್ನ ಮೂಲ ಉದ್ದೇಶ. ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದ್ದೇನೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಯಾವ ಸಂಸದರನ್ನು ಮುಂದುವರಿಸಬೇಕು. ಯಾರನ್ನು ಹೊಸದಾಗಿ ಕಣಕ್ಕಿಳಿಸಬೇಕು ಎಂಬ ಅಂತಿಮ ಚರ್ಚೆ ಪಕ್ಷದ ಆಂತರಿಕ ವಲಯದಲ್ಲಿ ನಡೆಯುತ್ತಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣೆಯಲ್ಲಿ ಒಂದಾದರೂ ಈ ಬಾರಿಯೂ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು.
ದೇವೇಗೌಡರು ಪ್ರಧಾನಿಯಾಗಲ್ಲ
ದೇಶದಲ್ಲಿ ಈಗಾಗಲೇ ತೃತೀಯ ರಂಗ ಸಂಘಟನೆಯಾಗಿದೆ. ಈ ನಾಯಕರು ಏನೇ ಮಾಡಿದರೂ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ. ಎಚ್.ಡಿ.ದೇವೇಗೌಡರು ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ. 2019ರಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ: ಇದೇ ವೇಳೆ ಸಮ್ಮಿಶ್ರ ಸರ್ಕಾರದ ಬಜೆಟ್ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮಾತೋಲನೆ ಎದ್ದು ಕಾಣುತ್ತಿದೆ. ಇದು ರಾಜ್ಯ ಬಜೆಚ್ ಅಲ್ಲ. ಉತ್ತರ ಕರ್ನಾಟಕ, ಕರಾವಳಿ, ಹಳೆ ಮೈಸೂರು, ಮಲೆನಾಡು ಎಂದು ವಿಂಗಡಿಸಿ ತಾರತಮ್ಯ ಮಾಡಲಾಗಿದೆ. ಅಣ್ಣ-ತಮ್ಮಂದಿರ ಬಜೆಚ್ ನಲ್ಲಿ ಎಲ್ಲಾ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.