
ಪಟನಾ (ಅ. 24): ಚುನಾವಣಾ ತಂತ್ರಗಾರ ಹಾಗೂ ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್, ತಾವು ಮುಂದಿನ 10 ವರ್ಷ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಹಾರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ತಮ್ಮ ಗುರಿ ಎಂದು ಹೇಳಿದ್ದಾರೆ.
ಪಕ್ಷದ ಯುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಯುನಿಂದ ಸ್ಪರ್ಧಿಸುವ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಜೆಡಿಯುಗೆ ಸೇರ್ಪಡೆಯಾದ ಪ್ರಶಾಂತ್ ಕಿಶೋರ್‌ರನ್ನು ಇತ್ತೀಚೆಗಷ್ಟೇ ಪಕ್ಷದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಅಲ್ಲದೇ ಅವರನ್ನು ರಾಜ್ಯಸಭೆಗೆ ಕಳುಹಿಸುವ ಬಗ್ಗೆಯೂ ಸಿಎಂ ನಿತೀಶ್ ಚಿಂತಿಸಿದ್ದರು ಎನ್ನಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.