'ಟಿಕೆಟ್ ಸಿಗದಿದ್ದರೂ ಬಿಜೆಪಿ ಬಿಟ್ಟು ಜೆಡಿಎಸ್ ಸೇರಲ್ಲ'

By Web DeskFirst Published Sep 19, 2018, 2:10 PM IST
Highlights

ಪಕ್ಷ ಟಿಕೆಟ್ ನೀಡದಿದ್ದಲ್ಲಿ ನನ್ನ ಕುಟುಂಬ ಮುಳುಗುವುದಿಲ್ಲ. ನಾನು ಜೆಡಿಎಸ್ ಅಭ್ಯರ್ಥಿ ಆಗುತ್ತೇನೆ ಎಂಬುದು ಶುದ್ಧ ಸುಳ್ಳು : ರಮೇಶ ಜಿಗಜಿಣಗಿ 

ವಿಜಯಪುರ[ಸೆ.19]: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನೀಡಿದರೆ ತಾನು ಚುನಾವಣೆಯಲ್ಲಿ ಸ್ಪರ್ಧಿಸು ತ್ತೇನೆ. ಬೇರೆ ಯಾರಿಗಾದರೂ ನೀಡಿದರೆ ಅವರ ಗೆಲುವಿಗೆ ಶ್ರಮಿಸುತ್ತೇನೆ. ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡದಿದ್ದಲ್ಲಿ ನನ್ನ ಕುಟುಂಬ ಮುಳುಗುವುದಿಲ್ಲ. ನಾನು ಜೆಡಿಎಸ್ ಅಭ್ಯರ್ಥಿ ಆಗುತ್ತೇನೆ ಎಂಬುದು ಶುದ್ಧ ಸುಳ್ಳು ಎಂದರು.

ರಾಜೀನಾಮೆ ಕೊಟ್ಟು ಗೆಲ್ಲುವ ಧೈರ್ಯ ಶಾಸಕರಿಗಿಲ್ಲ 
ನಾಗಮಂಗಲ:
ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಐದು ವರ್ಷಗಳ ಕಾಲ ಅಧಿಕಾರ ನಡೆಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು. 
ತಾಲೂಕಿನ ಆದಿಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಕಳೆದು ಕೇವಲ ನಾಲ್ಕು ತಿಂಗಳಲ್ಲಿ ಯಾವುದೇ ಶಾಸಕನಿಗೆ ತನ್ನ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷದಿಂದ ಗೆದ್ದು ಬರುತ್ತೇನೆಂಬ ಧೈರ್ಯ ಬರುವುದಿಲ್ಲ ಎಂದರು.

ಆಪರೇಷನ್, ಗೀಪರೇಷನ್ ನಡೆಯಲ್ಲ: ಶಾಮನೂರು
ದಾವಣಗೆರೆ:
ಆಪರೇಷನ್, ಗೀಪರೇಷನ್ ಏನೂ ನಮ್ಮ ಪಕ್ಷದ ಮೇಲೆ ನಡೆಯುವುದಿಲ್ಲ. ಕಾಂಗ್ರೆಸ್ಸಿನ ಎಲ್ಲಾ ಶಾಸಕರೂ ಬಿಗಿಯಾಗಿದ್ದು, ಯಾರನ್ನೂ ರೆಸಾರ್ಟ್‌ಗೆ ಕರೆದೊಯ್ಯುವ ಅಗತ್ಯವೇ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸೇರಿದಂತೆ ಯಾರೂ ಪಕ್ಷ ತೊರೆಯುವುದಿಲ್ಲ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದರು.

click me!