ಬಿಜೆಪಿ ಸೇರ್ತಾರ ಕಾಂಗ್ರೆಸ್ ಶಾಸಕ..?

By Ramesh BFirst Published Sep 17, 2018, 2:18 PM IST
Highlights

ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಮುಲಾಮು ಹಚ್ಚುವ ಕೆಲಸ ಆರಂಭಿಸಿದ್ದಾರೆ. ಅದರಂತೆ ಇಂದು ಅತೃಪ್ತರು ಬಂದು ಭೇಟಿಯಾಗಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು. 

ಬೆಂಗಳೂರು, (ಸೆ.17): ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನಕ್ಕೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಮುಲಾಮು ಹಚ್ಚುವ ಕೆಲಸ ಆರಂಭಿಸಿದ್ದಾರೆ. ಅದರಂತೆ ಇಂದು ಅತೃಪ್ತರು ಬಂದು ಭೇಟಿಯಾಗಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ​ ನಾನು ನಮ್ಮ ಜಿಲ್ಲೆಯ ಸಮಸ್ಯೆಗಳನ್ನು ಸಿದ್ದರಾಮಯ್ಯನವರ ಬಳಿ ಚರ್ಚೆ ಮಾಡಿದ್ದೇನೆ. ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ತರುವ ಹೇಳಿಕೆಗಳನ್ನು ನೀಡಬಾರದು ಎಂದು ಅವರೂ ಸಲಹೆ ನೀಡಿದ್ದಾರೆ. ಇವತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.

ಇನ್ನು ಆಪರೇಷನ್​ ಕಮಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ನಾನು ಪೇಷೆಂಟ್ ಅಲ್ಲಾ. ಸರ್ಜನ್ ಕೂಡ ಅಲ್ಲ. ಹಾಗಾಗಿ ಆಪರೇಷನ್ ಗೆ ಒಳಗಾಗುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

ಜಿಲ್ಲಾ ಮಟ್ಟದ ಸಮಸ್ಯೆಗಳ ಕುರಿತು ಸಿದ್ದರಾಮಯ್ಯ ಹಾಗೂ ಕೆ ಸಿ ವೇಣುಗೋಪಾಲ್ ಗಮನಕ್ಕೂ ಕೂಡ ತಂದಿದ್ದೇನೆ. ಅವರು ಸಮಸ್ಯೆ ಬಗೆಹರಿಸುವ ಭರವಸೆ ಕೊಟ್ಟಿದ್ದಾರೆ ಎಂದರು.

click me!