
ಹಾಸನ (ಜೂ. 26): ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಮುಂದುವರೆದಿದ್ದಾರೆ. ಇದುವರೆಗೂ ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರರಾಗಿದ್ದಾರೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಡಿ.ರಂದೀಪ್ ರೋಹಿಣಿ ಸಿಂಧೂರಿ ವರ್ಗಾವಣೆ ಸಮಯದಲ್ಲಿ ಹಾಸನ ಡಿಸಿಯಾಗಿ ವರ್ಗಾವಣೆಗೊಂಡಿದ್ದರು. ಅವಧಿ ಪೂರ್ಣಗೊಳ್ಳುವ ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಕಾರಣದಿಂದ ಡಿ.ರಂದೀಪ್ ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ನಿಯೂಕ್ತಿಗೊಂಡಿದ್ದರು.
ಸತತ ಕಾನೂನು ಹೋರಾಟದ ನಂತರ ಮತ್ತೆ ಹಾಸನ ಡಿಸಿಯಾಗಿ ರೋಹಿಣಿ ಸಿಂಧೂರಿ ವರ್ಗಾವಣೆಗೊಂಡಿದ್ದಾರೆ.
ನನ್ನ ಕರ್ತವ್ಯ ಸ್ಥಳ ನಿಗದಿ ಮಾಡುವಂತೆ ಐಎಎಸ್ ಅಧಿಕಾರಿ ಡಿ.ರಂದೀಪ್ ಮನವಿ ಮಾಡಿದ್ದರು. ಆದರೆ ಈವರೆಗೂ ಐಎಎಸ್ ಅಧಿಕಾರಿಗೆ ಯಾವುದೇ ಹುದ್ದೆ ನೀಡಿಲ್ಲ. ಬರೋಬ್ಬರಿ ಮೂರು ತಿಂಗಳಿನಿಂದ ಕೆಲಸವಿಲ್ಲದೆ ಕುಳಿತಿದ್ದಾರೆ ಐಎಎಸ್ ಅಧಿಕಾರಿ ಡಿ.ರಂದೀಪ್.
ನಿನ್ನೆ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣ ಇತ್ಯರ್ಥಗೊಂಡಿದೆ. ಆದರೆ ಇನ್ನೂ ಐಎಎಸ್ ಅಧಿಕಾರಿ ಡಿ.ರಂದೀಪ್ ಹುದ್ದೆ ವಿಚಾರ ಇತ್ಯರ್ಥವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.