
ಬೆಂಗಳೂರು (ಮಾ. 15): ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಸುದೀರ್ಘ ರಜೆಯಲ್ಲಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಕರ್ತವ್ಯಕ್ಕೆ ಹಾಜರಾಗದೇ ರಜೆಯಲ್ಲಿರುವ ರಶ್ಮೀ ಮಹೇಶ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಜೆಪಿ ನಗರ 7 ನೇ ಕ್ರಾಸ್ 7 ನೇ ಹಂತದಲ್ಲಿ ಇರುವ ಬ್ರಿಗ್ರೇಡ್ ಪಾಮ್ ಸ್ಪ್ರಿಂಗ್ಸ್ ಅಪಾರ್ಟ್’ನಲ್ಲಿ ವಾಸವಾಗಿದ್ದಾರೆ. ಅರ್ಪಾಟ್ಮೆಂಟ್ ನ ಭದ್ರತಾ ಸಿಬ್ಬಂದಿ ಕೂಡ ಅವರ ವಾಸದ ಬಗ್ಗೆ ಮಾಹಿತಿಯನ್ನು ನೀಡುತ್ತಿಲ್ಲ. ಇದೇ ಅಪಾರ್ಟ್’ಮೆಂಟ್’ನಲ್ಲಿ ರಶ್ಮೀ ಮಹೇಶ್ ತಂಗಿ ವಾಸವಾಗಿದ್ದಾರೆ.
ತಾವು ಕೆಲಸ ಮಾಡಿದ ಇಲಾಖೆಗಳಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಯಾವುದೇ ಮುಲಾಜಿಲ್ಲದೇ ಬಯಲಿಗೆಳೆದಿದ್ದರು. ಈ ಕಾರಣಕ್ಕೆ ಪದೇಪದೆ ಅವರನ್ನು ವರ್ಗಾವಣೆ ಮಾಡಲಾಗುತ್ತಿತ್ತು. ಪಿಯು ಮಂಡಳಿಯಲ್ಲಿ ನಿರ್ದೇಶಕರಾಗಿದ್ದಾಗ ಮಂಡಳಿಯ ಅಕ್ರಮಗಳನ್ನು ಬಹಿರಂಗಪಡಿಸಿದ್ದರು. ನಂತರ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಯಾಗಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಮೇಲೆ ತಿರುಗಿಬಿದ್ದಿದ್ದರು. ಈ ಕಾರಣಕ್ಕಾಗಿ ಅವರನ್ನು ರಜೆ ಮೇಲೆ ಕಳುಹಿಸಿ ನಂತರ ಮೈಸೂರಿನ ಆಡಳಿತ ಮತ್ತು ತರಬೇತಿ ಕೇಂದ್ರದ ಆಯಕ್ತರಾಗಿ ವರ್ಗ ಮಾಡಲಾಗಿತ್ತು.
ಅಲ್ಲಿಯೂ ತರಬೇತಿ ಕೇಂದ್ರದಲ್ಲಿ ಸುಮಾರು 100 ಕೋಟಿ ರೂ. ಹಗರಣ ಬೆಳಕಿಗೆ ತಂದಿದ್ದರು. ಈ ಕಾರಣಕ್ಕಾಗಿ ಅವರ ಮೇಲೆ ಹಲ್ಲೆಯೂ ನಡೆದಿತ್ತು. ಅದಾದ ಬಳಿಕ ಅವರನ್ನು ಆಹಾರ ಸಂಸ್ಕರಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನ ಇಲಾಖೆಗೆ ವರ್ಗಾಯಿಸಲಾಯಿತು. ಕೆಲವೇ ದಿನಗಳಲ್ಲಿ ಬಿಬಿಎಂಪಿ ಹಣಕಾಸು ಮತ್ತು ಜಾಹೀರಾತು ವಿಭಾಗದ ಮುಖ್ಯಾಧಿಕಾರಿಯಾಗಿ ಮತ್ತೆ ವರ್ಗ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.