
ಬೆಂಗಳೂರು, [ಮೇ.16]: 'ರೋಹಿಣಿ ಸಿಂಧೂರಿ ಮೇಡಂ Welcome To Raichur’ ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.
ಪ್ರಸ್ತುತ ರೋಹಿಣಿ ಸಿಂಧೂರಿ ಅವರು ಬೆಂಗಳೂರಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿಲ್ಲ.
ಖಡಕ್ ಡಿಸಿ, ಜನ ಮೆಚ್ಚಿದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ
ಆದ್ರೆ, ಇದ್ದಕ್ಕಿದ್ದಂತೆ ಇಂದು [ಗುರುವಾರ] ರೋಹಿಣಿ ಸಿಂಧೂರಿ ಮೇಡಂ 'ರೋಹಿಣಿ ಸಿಂಧೂರಿ ಮೇಡಂ Welcome To Raichur’ ಎಂದು ಫೇಸ್ ಬುಕ್ ನಲ್ಲಿ ಫುಲ್ ವೈರಲ್ ಆಗುತ್ತಿದೆ.
2017 ಜುಲೈ14 ರಿಂದ ಹಾಸನ ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದ ರೋಹಿಣಿ ಸಿಂಧೂರಿ ಅವರನ್ನು 2019. ಫೆಬ್ರವರಿ 22ರಂದು ರಾಜ್ಯ ಸರ್ಕಾರ, ಬೆಂಗಳೂರಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದಶಿಯಾನ್ನಾಗಿ ವರ್ಗಾವಣೆ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.