
ಬೆಂಗಳೂರು (ಫೆ.13): ಐಎಎಸ್ ಅಧಿಕಾರಿ ಪತ್ನಿಯ 20 ಗ್ರಾಂ ಚಿನ್ನದ ಸರ ವಿಧಾನಸೌಧದಲ್ಲಿ ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಣಕಾಸು ಇಲಾಖೆಯ ಕಾರ್ಯದರ್ಶಿ ರಿತೇಶ್ ಕುಮಾರ್ ಪತ್ನಿಯ ಸರವನ್ನು ಸರಿಪಡಿಸಲು ತಂದಿದ್ದರು. ವಿಧಾನಸೌಧದ 2ನೇ ಮಹಡಿಯ ಕೊಠಡಿ 208ರಲ್ಲಿ ಸರ ನಾಪತ್ತೆಯಾಗಿದೆ.
ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಸರಿ ಮಾಡಿಸದೇ ತಮ್ಮ ಡ್ರಾಯರ್ನಲ್ಲಿ ಸರವನ್ನು ಹಾಗೇ ಇಟ್ಟಿದ್ದರು. ನಾಪತ್ತೆಯಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು ಐಎಎಸ್ ಅಧಿಕಾರಿ ರಿತೇಶ್ ಕುಮಾರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.