
ಬೆಂಗಳೂರು(ಜು.04): ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ನಿನ್ನೆ ತಡರಾತ್ರಿ ರಹಸ್ಯ ಸಭೆ ನಡೆದಿದೆ ಎನ್ನುವ ಎಕ್ಸ್ಕ್ಲೂಸಿವ್ ಮಾಹಿತಿ ಸುವರ್ಣ ನ್ಯೂಸ್'ಗೆ ಲಭ್ಯವಾಗಿದೆ. ಸಭೆಯಲ್ಲಿ ಮುಂಬರುವ ಚುನಾವಣೆ ದೃಷ್ಟಿಯಿಂದ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ರಾತ್ರಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ್ ಹಾಗೂ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಭಾವಿ ಮುಖಂಡರು ಭಾಗಿಯಾಗಿದ್ದರು ಎನ್ನಲಾಗಿದೆ. ಹಾಲಿ ಶಾಸಕರು ಹಾಗೂ ಚುನಾವಣೆಗೆ ಸ್ಪರ್ಧಿಸುವಂತವರಿಗೆ, KPCC ಪದಾಧಿಕಾರಿ ಹಾಗೂ ಹಾಗೂ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡದಿರಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಇನ್ನು ಇದೇ ಸಂದರ್ಭ 10 ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ KPCC ಪದಾಧಿಕಾರಿಗಳ ಆಯ್ಕೆ ಅಂತಿಮಗೊಳಿಸಲು ನಿರ್ಧರಿಸಲಾಗಿದೆ. ಆಗಸ್ಟ್ ತಿಂಗಳ ಅಂತ್ಯದೊಳಗೆ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಾವೇಶಗಳನ್ನ ಆಯೋಜಿಸಲು ನಿರ್ಧರಿಸಲಾಗಿದೆ ಎನ್ನುವ ಮಾಹಿತಿ ಸುವರ್ಣ ನ್ಯೂಸ್'ಗೆ ಉನ್ನತ ಮೂಲಗಳಿಂದ ಲಭ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.