ಕರ್ನಾಟಕ ಚುನಾವಣೆ ವೇಳೆ ಆ್ಯಪ್‌ನಲ್ಲಿ 780 ದೂರು

Published : Jun 03, 2018, 09:42 AM IST
ಕರ್ನಾಟಕ ಚುನಾವಣೆ ವೇಳೆ  ಆ್ಯಪ್‌ನಲ್ಲಿ 780 ದೂರು

ಸಾರಾಂಶ

ಚುನಾವಣಾ ಅಕ್ರಮ ಬಯಲಿಗೆ ಎಳೆದವರ ಗುರುತು ಬಹಿರಂಗಪಡಿಸುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್‌ ರಾವತ್‌ ಭರವಸೆ ನೀಡಿದ್ದಾರೆ. ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಆ್ಯಪ್‌ ಆರಂಭಿಸಿದ್ದ ಚುನಾವಣಾ ಆಯೋಗ, ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಆ್ಯಪ್‌ನಲ್ಲೇ ದೂರು ನೀಡಲು ಅವಕಾಶ ಕಲ್ಪಿಸುವ ವ್ಯವಸ್ಥೆ ಆರಂಭಿಸಿತ್ತು.  

ಕೊಹಿಮಾ (ಜು. 03): ಚುನಾವಣಾ ಅಕ್ರಮ ಬಯಲಿಗೆ ಎಳೆದವರ ಗುರುತು ಬಹಿರಂಗಪಡಿಸುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್‌ ರಾವತ್‌ ಭರವಸೆ ನೀಡಿದ್ದಾರೆ.

ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಆ್ಯಪ್‌ ಆರಂಭಿಸಿದ್ದ ಚುನಾವಣಾ ಆಯೋಗ, ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಆ್ಯಪ್‌ನಲ್ಲೇ ದೂರು ನೀಡಲು ಅವಕಾಶ ಕಲ್ಪಿಸುವ ವ್ಯವಸ್ಥೆ ಆರಂಭಿಸಿತ್ತು.

ಈ ಬಗ್ಗೆ ನಾಗಾಲ್ಯಾಂಡ್‌ಗೆ ಭೇಟಿ ನೀಡಿದ ವೇಳೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಚುನಾವಣಾ ಅಕ್ರಮಗಳ ಬಗ್ಗೆ ಕರ್ನಾಟಕದಲ್ಲಿ ಈ ಆ್ಯಪ್‌ ಮೂಲಕ 780 ವಿಡಿಯೋ ದೂರುಗಳನ್ನು ನಾವು ಸ್ವೀಕರಿಸಿದೆವು. ಸಾಕ್ಷ್ಯ ಸಮೇತ ದೂರು ಸಲ್ಲಿಸಲು ಇದು ದೂರುದಾರಿಗೆ ಸಹಾಯ ಮಾಡಿತು. ದೂರುದಾರರ ಮಾಹಿತಿ ಬಹಿರಂಗವಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅಭಯ ನೀಡಿದರು.

ಇದೇ ವೇಳೆ, ಇವಿಎಂಗಳಲ್ಲಿ ಯಾವುದೇ ದೋಷವಿಲ್ಲ. ಸುಮ್ಮನೇ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ರಾಜಕೀಯ ಪಕ್ಷಗಳು ವಿದ್ಯುನ್ಮಾನ ಮತಯಂತ್ರದ ಮೇಲೆ ಗೂಬೆ ಕೂರಿಸುತ್ತಿವೆ ಎಂದು ರಾವತ್‌ ಆಕ್ಷೇಪಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಅರ್ಧ ಬೆಂಗಳೂರಿಗೆ ನೀರು ಪೂರೈಕೆ ಸ್ಥಗಿತ: ಕಾವೇರಿ 5ನೇ ಹಂತದ ಪೈಪ್‌ಲೈನ್‌ನಲ್ಲಿ ಸೋರಿಕೆ!
ಚಿನ್ನದ ಬೆಲೆ ಲಕ್ಷ ದಾಟಿದ ಬೆನ್ನಲ್ಲೇ ಕರ್ನಾಟಕದ ಈ ಜಿಲ್ಲೆಗೆ ಜಾಕ್‌ಪಾಟ್‌, ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!