
ಬೆಂಗಳೂರು (ಡಿ.15): ಹೊಸ ವರ್ಷಾಚರಣೆ ವೇಳೆ ಈ ಬಾರಿಯೂ ಅಹಿತಕರ ಘಟನೆ ನಡೆದರೆ ಪೊಲೀಸ್ ಆಯುಕ್ತರೇ ಹೊಣೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ.ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಈ ಹಿಂದೆ ನಡೆದ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುವುದು. ಅಂದು ಎಲ್ಲ ಪೊಲೀಸ್ ಅಧಿಕಾರಿಗಳಿಗೆ ರಜೆ ಇಲ್ಲ. ಭದ್ರತೆಗೆ 8 ಸಾವಿರ ಪೊಲೀಸ್ ಸಿಬ್ಬಂದಿಗಳು ನೇಮಕ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಆಳವಡಿಸಲಾಗಿದೆ. ಮೇಲ್ಸೇತುವೆಗಳ ಮೇಲೆ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ ಎಂದು ಸರ್ಕಾರದ ಪರ ಎಎಜಿ ಪೊನ್ನಣ್ಣ ಹೈಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ನಗರದ ಹಲವೆಡೆ ವಾಚ್ ಟವರ್ ಗಳನ್ನು ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುತ್ತೆವೆ ಎಂದು ಸರ್ಕಾರದ ಪರ ಎಎಜಿ ಪೊನ್ನಣ್ಣ ಹೈಕೋರ್ಟ್'ಗೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.