'ಬಿಜೆಪಿ ಗೆದ್ದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ'

Published : Jul 22, 2019, 08:08 AM ISTUpdated : Jul 22, 2019, 08:37 AM IST
'ಬಿಜೆಪಿ ಗೆದ್ದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ'

ಸಾರಾಂಶ

ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನ ಭೀತಿ| ಬಿಜೆಪಿ ಗೆದ್ದರೆ ನಾನೂ ಸಚಿವ ಸ್ಥಾನದ ಆಕಾಂಕ್ಷಿ: ತಿಪ್ಪಾರೆಡ್ಡಿ| 

ಚಿತ್ರದುರ್ಗ[ಜು.22]: ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪ್ರತಿಪಕ್ಷ ಬಿಜೆಪಿ ಮುಖಂಡರಲ್ಲಿ ಮಂತ್ರಿಗಿರಿ ಲೆಕ್ಕಾಚಾರಗಳು ಬಿರುಸಾಗಿ ನಡೆಯುತ್ತಿವೆ. ಸಮ್ಮಿಶ್ರ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ತಾವು ಸಚಿವ ಸ್ಥಾನದ ಆಕಾಂಕ್ಷಿ. ವರಿಷ್ಠರು ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರಿದ್ದು ಅವರಲ್ಲಿ ನಾನೇ ಹಿರಿಯ ಶಾಸಕನಾನಾಗಿದ್ದೇನೆ. ರಾಜ್ಯದ ಬಿಜೆಪಿ ಹಿರಿಯ ಶಾಸಕರ ಪಟ್ಟಿಯಲ್ಲಿಯೂ ನಾನಿದ್ದೇನೆ ಎಂದು ಹೇಳಿದರು.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಿಲ್ಲೆಯಲ್ಲಿ ಹೆಚ್ಚು ಬಾರಿ ಗೆದ್ದು ವಿಧಾನಸಭೆಗೆ ಹೋಗಿದ್ದೇನೆ. ಕಳೆದ 15-20ವರ್ಷಗಳಿಂದ ಹೊರ ಜಿಲ್ಲೆಯವರೇ ಜಿಲ್ಲೆ ಮಂತ್ರಿಗಳಾಗಿದ್ದಾರೆ. ಇದರಿಂದ ಜಿಲ್ಲೆಯೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಜಿಲ್ಲೆಯವರು ಮಂತ್ರಿಗಳಾಗಬೇಕು ಎನ್ನುವ ಕೂಗು ಜನರಲ್ಲಿದೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ವರಿಷ್ಠರು ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ