
ತಿರುವನಂತಪುರಂ(ಜು.12): 2019 ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದರೆ ಭಾರತ ಹಿಂದೂ ಪಾಕಸಿ್ತಾನವಾಗಲಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಎಚ್ಚರಿಸಿದ್ದಾರೆ. ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಧರ್ಮಗಳ ನಡುವಿನ ಕಂದಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.
ಅಲ್ಪಸಂಖ್ಯಾತ ಹಿಂದೂಗಳ ಹಕ್ಕನ್ನು ಪಾಕಿಸ್ತಾನ ಗೌರವಿಸುವುದಿಲ್ಲ ಅದೇ ರೀತಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತದಲ್ಲಿ ಅಲ್ಪಸಮಖ್ಯಾತರ ಹಕ್ಕುಳಿಗೆ ಚ್ಯುತಿ ಬರಲಿದೆ ಎಂಬುದು ಶಶಿ ತರೂರ್ ವಾದವಾಗಿದೆ. ಮತ್ತೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ, ದೇಶದ ಸಂವಿಧಾನದಲ್ಲಿ ಬದಲಾವಣೆ ತಂದು ಅಲ್ಪಸಂಖ್ಯಾತರ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ನಡೆಸಿದೆ ಎಂದು ತರೂರ್ ಗಂಭೀರ ಆರೋಪ ಮಾಡಿದ್ದಾರೆ.
ಸಂವಿಧಾನದ ಮೂಲ ಆಶಯಗಳನ್ನು ಬದಿಗೊತ್ತಿ ಭಾರತವನ್ನು ಉನ್ಮತ್ತ ಮತ್ತು ಅಸಹಿಷ್ಣು ಹಿಂದೂ ರಾಷ್ಟವನ್ನಾಗಿ ಪರಿವರ್ತಿಸುವ ಬಿಜೆಪಿ ಹುನ್ನಾರವನ್ನು ನಾವೆಲ್ಲಾ ಅರಿಯಬೇಕಿದೆ ಎಂದು ತರೂರ್ ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಹೋರಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದ್ದು, ರಾಜಕೀಯ ಪಕ್ಷಗಳು ಈ ಕುರಿತು ಗಂಭೀರ ಚಿಂತನೆ ನಡೆಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ವಲ್ಲಬಾಯ್ ಪಟೇಲ್, ಮೌಲಾನಾ ಆಜಾದ್ ಅವರಂತಹ ಮಹಾನ್ ನಾಯಕರ ಆಶಯದಂತಿರುವುದಿಲ್ಲ ಎಂದು ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.