ಬಿಎಸ್'ವೈ ತಪ್ಪು ಮಾಡಿಲ್ಲ ಎಂದಾದರೆ ಎಸಿಬಿ ಮುಂದೆ ಹೋಗಿ ಹೇಳಲಿ: ಸಿಎಂ

Published : Aug 21, 2017, 10:18 PM ISTUpdated : Apr 11, 2018, 01:11 PM IST
ಬಿಎಸ್'ವೈ ತಪ್ಪು ಮಾಡಿಲ್ಲ ಎಂದಾದರೆ ಎಸಿಬಿ ಮುಂದೆ ಹೋಗಿ ಹೇಳಲಿ: ಸಿಎಂ

ಸಾರಾಂಶ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಪ್ಪು ಮಾಡಿದರೂ ಬಿಟ್ಟುಬಿಡಬೇಕಾ? ಬಿಡಲಿಕ್ಕೆ ಆಗುತ್ತಾ? ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆಯಾ? ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ ತಪ್ಪು ಮಾಡಿಲ್ಲ ಎನ್ನುವುದಾದರೆ ಅದನ್ನು ಎಸಿಬಿ ಮುಂದೆ ಹೋಗಿ ಹೇಳಲಿ ಎಂದು ಹೇಳಿದರು.

ಬೆಂಗಳೂರು (ಆ.21): ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಪ್ಪು ಮಾಡಿದರೂ ಬಿಟ್ಟುಬಿಡಬೇಕಾ? ಬಿಡಲಿಕ್ಕೆ ಆಗುತ್ತಾ? ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆಯಾ? ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ ತಪ್ಪು ಮಾಡಿಲ್ಲ ಎನ್ನುವುದಾದರೆ ಅದನ್ನು ಎಸಿಬಿ ಮುಂದೆ ಹೋಗಿ ಹೇಳಲಿ ಎಂದು ಹೇಳಿದರು.
 
ಯಡಿಯೂರಪ್ಪ ಪ್ರಕರಣದಲ್ಲಿ ಬಿಜೆಪಿಯವರು ತಪ್ಪಿತಸ್ಥ ಸ್ಥಾನದಲ್ಲಿದ್ದಾರೆ. ಆದ್ದರಿಂದಲೇ ಬಿಜೆಪಿಯವರು ಕಾಂಗ್ರೆಸ್ ಎಸಿಬಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡುತ್ತಿದ್ದಾರೆ. ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ. ಇದು ಗೊತ್ತಿದ್ದರೂ ಅವರನ್ನೂ ಬಿಟ್ಟು ಬಿಡಬೇಕಾ? ಎಂದರು. ಯಡಿಯೂರಪ್ಪ ಅವರನ್ನು ಸಿಲುಕಿಸಲು ನನ್ನ ಮೇಲೆ ಒತ್ತಡವಿದೆ ಎಂದು ಎಸಿಬಿ ವಿರುದ್ಧ ದೂರು ನೀಡಿರುವ ಕೆಎಎಸ್ ಅಧಿಕಾರಿ ಇಷ್ಟು ದಿನ ಸುಮ್ಮನಿದ್ದದ್ದು ಏಕೆ ಎಂದೂ ಅವರು ಪ್ರಶ್ನಿಸಿದರು. ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಅವರ ಮೇಲೆ ಒತ್ತಡ ಹೇರಿದ್ದರೆ ಅಥವಾ ನಾವು ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿದ್ದರೆ, ಅವರು ಮೊದಲೇ ದೂರು ಸಲ್ಲಿಸಬಹುದಿತ್ತು. ಇಷ್ಟು ದಿನ ಸುಮ್ಮನಿದ್ದು, ಈಗ ಏಕೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ? ಇದು ಏನನ್ನು ತೋರಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ
India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌