ಪೌರತ್ವ ಕಾಯ್ದೆ ಅಂಗೀಕಾರ ಮಾಡದಿದ್ದಲ್ಲಿ 5 ವರ್ಷದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು

Published : Jan 08, 2019, 11:07 AM ISTUpdated : Jan 08, 2019, 11:24 AM IST
ಪೌರತ್ವ ಕಾಯ್ದೆ ಅಂಗೀಕಾರ ಮಾಡದಿದ್ದಲ್ಲಿ 5 ವರ್ಷದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು

ಸಾರಾಂಶ

ರಾಜ್ಯದಲ್ಲಿ ಪೌರತ್ವ ಕಾಯ್ದೆಯನ್ನು ಅಂಗೀಕಾರ ಮಾಡದಿದ್ದಲ್ಲಿ  ಮುಂದಿನ 5 ವರ್ಷದಲ್ಲಿ ಅಸ್ಸಾಂನಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅಸ್ಸಾಂ ಸಚಿವರೋರ್ವರು ಆತಂಕ ವ್ಯಕ್ತಪಡಿಸಿದ್ದಾರೆ.

ಗುವಾಹಟಿ[ಜ.08]: ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಅಂಗೀಕರಿಸದೇ ಹೋದಲ್ಲಿ ಮುಂದಿನ 5 ವರ್ಷದಲ್ಲಿ ಅಸ್ಸಾಂನಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ರಾಜ್ಯದ ಹಿರಿಯ ಸಚಿವ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಪೌರತ್ವ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದ ಶರ್ಮಾ, ಈ ಕಾಯ್ದೆ ಜಾರಿಯಾಗದೇ ಹೋದಲ್ಲಿ, ರಾಜ್ಯವನ್ನು ಮತ್ತೊಂದು ಕಾಶ್ಮೀರ ಮಾಡಲು ಬಯಸಿದ್ದವರಿಗೆ ಬಹಳ ನೆರವಾಗಲಿದೆ ಎಂದು ಮಸೂದೆ ವಿರೋಧಿಸುವವರಿಗೆ ಟಾಂಗ್‌ ನೀಡಿದ್ದಾರೆ.

ಪಾಕ್‌, ಬಾಂಗ್ಲಾ, ಆಫ್ಘನ್‌ನ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ

ಭಾರತದಲ್ಲಿ 6 ವರ್ಷದಿಂದ ನೆಲೆಸಿರುವ ಬಾಂಗ್ಲಾ, ಆಷ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಮೂಲದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡಲು ಸಲುವಾಗಿ ಪೌರತ್ವ ಕಾಯ್ದೆ ತಿದ್ದುಪಡಿಗೆ ನಿರ್ಧರಿಸಲಾಗಿದೆ. ಹಾಲಿ ನಿಯಮಗಳ ಅನ್ವಯ, 12 ವರ್ಷದಲ್ಲಿ ಭಾರತದಲ್ಲಿ ನೆಲೆಸಿದ್ದವರಿಗೆ ಮಾತ್ರ ಈ ಅವಕಾಶ ಸಿಗುತ್ತಿತ್ತು. ಅದನ್ನೀಗ 6 ವರ್ಷಕ್ಕೆ ಇಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು