
ಬೆಂಗಳೂರು (ಅ.18): ಸೆ.30ರೊಳಗೆ ಸುಸ್ತಿ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಮಾಡಲು ಹೇಳಿದ್ದು ರೂ.283 ಕೋಟಿ ರೂಪಾಯಿಯನ್ನು 95,235 ರೈತರು ಅಸಲು ಪಾವತಿ ಮಾಡಿದ್ದಾರೆ ಎಂದು ಸಹಕಾರ ಸಚಿವ ಮಹದೇವ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸರ್ಕಾರ ರೂ.177 ಕೋಟಿ ಬಡ್ಡಿಯನ್ನು ಕಟ್ಟಲಿದೆ. ಮಾರ್ಚ್ ಅಂತ್ಯದವರೆಗೂ ಸಾಲ ಮರುಪಾವತಿಗೆ ಅವಕಾಶ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ರೂ.297 ಕೋಟಿ ರೂಪಾಯಿ ಸಾಲ ಪಾವತಿ ಬಾಕಿ ಇದೆ. ಮಾರ್ಚ್ ಅಂತ್ಯದೊಳಗೆ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಆಗಲಿದೆ ಎಂದು ಮಹದೇವ್ ಪ್ರಸಾದ್ ಹೇಳಿದ್ದಾರೆ.
ಕಳೆದ ವರ್ಷ ರೂ.10,235 ಕೋಟಿ ಸಾಲ ವಿತರಿಸಲಾಗಿತ್ತು. ಈ ವರ್ಷ 11,600 ಕೋಟಿ ಸಾಲ ನೀಡುವ ಗುರಿ ಹೊಂದಿದ್ದೇವೆ. ಇದುವರೆಗೂ 5400 ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದಿದ್ದಾರೆ.
ಸಹಕಾರ ಸಂಘದಿಂದ ಸಾಲ ಪಡೆಯುವ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಕಡ್ಡಾಯಗೊಳಿಸಲಾಗಿದೆ. ಮೂರು ವರ್ಷದಲ್ಲಿ ರೂ.139 ಕೋಟಿ ಕಬ್ಬಿನ ಬಾಕಿ ಪಾವತಿ ಮಾಡಬೇಕಿದೆ. ರೇಣುಕಾ ಸಕ್ಕರೆ ಕಾರ್ಖಾನೆ 2013-14 ರ 70 ಕೋಟಿ ರೈತರ ಹಣ ಬಾಕಿ ಕೊಡಬೇಕಿದೆ ಎಂದಿದ್ದಾರೆ.
ಈ ಬಾರಿ 4.5 ಲಕ್ಷ ಹೆಕ್ಟೇರ್ ನಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಕಬ್ಬಿನ ಉತ್ಪಾದನೆ ರೂ.315 ಲಕ್ಷ ಮೆಟ್ರಿಕ್ ಟನ್ ಕಬ್ಬು ಉತ್ಪಾದನೆ ಗುರಿ ಇದೆ. ಈ ಬಾರಿ ಸಕ್ಕರೆ ಬೆಲೆ ಹೆಚ್ಚಾಗಿರೋದ್ರಿಂದ ಕಾರ್ಖಾನೆಯವರು ಪೈಪೊಟಿ ಮೇಲೆ ಕಬ್ಬು ಖರೀದಿ ಮಾಡುತ್ತಿದ್ದಾರೆ. ಬೆಲ್ಲಕ್ಕೂ ಬೇಡಿಕೆ ಹೆಚ್ಚಾಗಿರೋದ್ರಿಂದ ಕಬ್ಬಿಗೆ ಬೇಡಿಕೆ ಹೆಚ್ಚಾಗಿದೆ. ಈ ವರ್ಷ ರೈತರಿಗೆ ಸಮಸ್ಯೆಯಾಗುವುದಿಲ್ಲ ಎಂದು ಮಹದೇವ್ ಪ್ರಸಾದ್ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.