ಸಂವಿಧಾನ ಮುಟ್ಟಿದರೆ ರಕ್ತಪಾತ : ಸಿದ್ದರಾಮಯ್ಯ

Published : Jul 03, 2019, 08:38 AM IST
ಸಂವಿಧಾನ ಮುಟ್ಟಿದರೆ ರಕ್ತಪಾತ : ಸಿದ್ದರಾಮಯ್ಯ

ಸಾರಾಂಶ

ಸಂವಿಧಾನವನ್ನು ಮುಟ್ಟಿದಲ್ಲಿ ದೇಶದಲ್ಲಿ ರಕ್ತಪಾತವೇ ಆಗಲಿದೆ ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು [ಜು.3] :  ಸಮಾಜದಲ್ಲಿ ಸಮಾನತೆಗೆ ಮೀಸಲಾತಿಯೇ ಪರಿಹಾರವಲ್ಲ. ಶೋಷಿತರು, ದುರ್ಬಲ ವರ್ಗದವರ ಅಭಿವೃದ್ಧಿಗೆ ಅದೊಂದು ಮಾರ್ಗವಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ನಗರದ ಪುರಭವನದ ಸಭಾಂಗಣದಲ್ಲಿ ‘ಕರ್ನಾಟಕ ರಾಜ್ಯ ಎಸ್ಸಿ,ಎಸ್ಟಿಗುತ್ತಿಗೆದಾರರ ಸಂಘ’ ಆಯೋಜಸಿದ್ದ ರಾಜ್ಯಮಟ್ಟದ ಸಮಾವೇಶ ಮತ್ತು ಮಿಲ್ಲ​ರ್ಸ್ ವರದಿ ಶತಮಾನೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಬುದ್ಧ, ಬಸವ, ಅಂಬೇಡ್ಕರ್‌ ಕಾಲದಲ್ಲೂ ಜಾತಿ ವ್ಯವಸ್ಥೆ ನಿರ್ಮೂಲನೆ ಸಾಧ್ಯವಾಗಲಿಲ್ಲ. ನಮ್ಮಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸಮಾನತೆ ಬರದ ಹೊರತು ಜಾತಿ ವ್ಯವಸ್ಥೆ ತೊಲಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ದುಡಿಯಬೇಕು ಎಂದು ಹೇಳಿದರು.

ರಕ್ತಪಾತ:  ಅಂಬೇಡ್ಕರ್‌ ಅವರು ಸಂವಿಧಾನ ರಚಿಸದಿದ್ದರೆ ನಮಗೆ ಸಮಾನತೆಯ ಸಂವಿಧಾನ ಸಿಗಲು ಸಾಧ್ಯವಿರಲಿಲ್ಲ. ಈಗಲೂ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಈ ಸಂವಿಧಾನದ ಬಗ್ಗೆ ಅಸಮಾಧಾನವಿದೆ. ಆದ್ದರಿಂದ ಆಗಾಗ ಸಂವಿಧಾನ ಬದಲು ಮಾಡಬೇಕು ಎಂದು ಹೇಳುತ್ತಿರುತ್ತಾರೆ. ಈ ಕುರಿತು ಎಲ್ಲರೂ ಎಚ್ಚರವಾಗಿರಬೇಕು. ಸಂವಿಧಾನ ಬದಲು ಮಾಡಲು ಕೈ ಹಾಕಿದರೆ ಈ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಎಚ್ಚರಿಸಿದರು.

ಪರಿಶಿಷ್ಟಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಎಸ್ಸಿಪಿ, ಟಿಎಸ್‌ಪಿ ಯೋಜನೆಯಡಿ ಈ ಹಿಂದೆ ಐದು ವರ್ಷದಲ್ಲಿ ಕೇವಲ 7ರಿಂದ 8 ಸಾವಿರ ಕೋಟಿ ರುಗಳನ್ನು ಖರ್ಚು ಮಾಡಲಾಗುತ್ತಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದು ವರ್ಷಕ್ಕೆ 30 ಸಾವಿರ ಕೋಟಿ ರು.ಗಳನ್ನು ಈ ಯೋಜನೆಗೆ ಮೀಸಲು ಇಡಲಾಯಿತು. ಒಂದು ವೇಳೆ ಆ ಹಣ ಖರ್ಚು ಮಾಡಲಾಗದಿದ್ದರೆ ಮುಂದಿನ ವರ್ಷದಲ್ಲಿ ವೆಚ್ಚ ಮಾಡಲು ಅವಕಾಶವಿದೆ. ಜತೆಗೆ ಅನುದಾನ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬಹುದಾಗಿದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಎನ್‌.ಮಹದೇವಸ್ವಾಮಿ ಮಾತನಾಡಿ, ಮೀಸಲಾತಿ ಅಧಾರದಲ್ಲಿ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆಯನ್ನು ವಿಸ್ತರಿಸುವ ಅಧಿನಿಯಮ 2017ರ ಅನುಷ್ಠಾನಕ್ಕೆ ಹೊರಡಿಸಿರುವ ಸುತ್ತೋಲೆ ಹಿಂಪಡೆಯಬೇಕು. ಸರ್ಕಾರದ ಆದೇಶದಂತೆ 50 ಲಕ್ಷ ರು.ಗಳವರೆಗಿನ ಕಾಮಗಾರಿಗಳನ್ನು ಒಂದು ಕೋಟಿ ರು.ಗಳಿಗೆ ಹೆಚ್ಚಿಸಬೇಕು. ಹಣ ವಿಳಂಬ ಪಾವತಿ ತಪ್ಪಿಸಲು ಎಸ್ಸಿಪಿ ಮತ್ತು ಟಿಎಸ್‌ಪಿ ಹಣದಿಂದ ಬಿಲ್‌ ಪಾವತಿ ಮಾಡಬೇಕು. ಲೋಕೋಪಯೋಗಿ, ನೀರಾವರಿ ಸೇರಿದಂತೆ ಇತರ ಪ್ರಮುಖ ಇಲಾಖೆಗಳ ಗುತ್ತಿಗೆಗಳಲ್ಲಿ ಮೀಸಲಾತಿ ಜಾರಿಯಾಗಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.

ಮಾಜಿ ಸಚಿವ ಎಚ್‌.ಆಂಜನೇಯ, ಮಾಜಿ ಸಂಸದರಾದ ಧ್ರುವನಾರಾಯಣ, ಆರ್‌.ಚಂದ್ರಪ್ಪ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ
ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ