IFS ಅಧಿಕಾರಿ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ!

By Web DeskFirst Published Sep 8, 2019, 3:17 PM IST
Highlights

ರಾಜ್ಯ ಕೆಡರ್‌ನ ಐಎಫ್‌ಎಸ್ ಅಧಿಕಾರಿ ಶವವಾಗಿ ಪತ್ತೆ| ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ದೊರೆತ  ಅವತಾರ್ ಸಿಂಗ್| ಅವತಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ| ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಫ್‌ಎಸ್ ಅಧಿಕಾರಿ| ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು| 

ಬೆಂಗಳೂರು(ಸೆ.08): ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಫ್‌ಎಸ್ ಅಧಿಕಾರಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅವತಾರ್ ಸಿಂಗ್, ಆತ್ಮಹತ್ಯೆ ಮಾಡಿಕೊಂಡಿರುವ ಐಎಫ್‌ಎಸ್ ಅಧಿಕಾರಿಯಾಗಿದ್ದು, ನಿನ್ನೆ(ಶನಿವಾರ) ಕರ್ತವ್ಯಕ್ಕೆ ಹಾಜರಾಗಿದ್ದರು. ಬಳಿಕ ಯಲಹಂಕದಲ್ಲಿನ ತಮ್ಮ ಪ್ರೇಸ್ಟೀಜ್ ಮೌಂಟ್ ಕಾರ್ಲೋ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

An IFS officer committed suicide in our block for reasons not known yet. Some local media gathered, although no statement was made by police. Met him couple of times in the elevator but never suspected this, I pray his soul to rest in peace. pic.twitter.com/q7yiqcWPRd

— Shubham Anand (@Shubhs77)

ಸದ್ಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಇದೊಂದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ಅಪಾರ್ಟ್‌ಮೆಂಟ್‌ ನಿವಾಸಿಯೊಬ್ಬರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

click me!