
ಪಾಟ್ನಾ(ಜ.15): ಬಿಹಾರ ಸಿಬ್ಬಂದಿ ನೇಮಕಾತಿ ಆಯೋಗದ ಪರೀಕ್ಷೆ ಬರೆಯಲಿದ್ದ ಮಹಿಳಾ ಪರೀಕ್ಷಾರ್ಥಿಗೆ ಪರೀಕ್ಷೆ ಪ್ರವೇಶ ಪತ್ರ ಕೈ ಸೇರಿದಾಗ ಮುಜುಗರಕ್ಕೀಡಾದ ಘಟನೆ ಬೆಳಕಿಗೆ ಬಂದಿದೆ.
ಆ ಪರೀಕ್ಷೆ ಪ್ರವೇಶ ಪತ್ರದಲ್ಲಿ ಅಭ್ಯರ್ಥಿಯ ಪಾಸ್‌ಪೋರ್ಟ್ ಫೋಟೊ ಬದಲಿಗೆ ನಟಿಯೊಬ್ಬಳ ಅರೆ ನಗ್ನ ಫೋಟೊ ಅಚ್ಚಾಗಿದ್ದು ರಾಷ್ಟ್ರವ್ಯಾಪ್ತಿ ಸುದ್ದಿಯಾಗಿದೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರೂರಾದ ನಲಂದಾದಲ್ಲಿಯೇ ಈ ಎಡವಟ್ಟು ನಡೆದಿದೆ.
ಪ್ರವೇಶಪತ್ರದಲ್ಲಿ ಬಿಹಾರದ ನಟಿಯೊಬ್ಬಳ ಅರೆ ನಗ್ನ ಫೋಟೊ ಪ್ರಕಟವಾಗಿದ್ದ ವಿಷಯ ಸಾಮಾಜಿಕ ತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದು ಪರೀಕ್ಷಾರ್ಥಿಯನ್ನು ಇನ್ನಷ್ಟು ಮುಜುಗರಕ್ಕೀಡಾಗುವಂತೆ ಮಾಡಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದೆಂದು ಬಿಎಸ್‍ಎಸ್‍ಸಿ ಕಾರ್ಯದರ್ಶಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.