ಉಪಚುನಾವಣೆ: 3.23 ಕೋಟಿ ಮೌಲ್ಯದ ಅಕ್ರಮ ಮದ್ಯ ವಶ

By Kannadaprabha NewsFirst Published Nov 22, 2019, 9:06 AM IST
Highlights

ಚುನಾವಣಾ ನೀತಿ ಸಂಹಿತೆ ಜಾರಿಯಾದ ನ.11ರಿಂದ ಇದುವರೆಗೆ ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.23 ಕೋಟಿ ಮೌಲ್ಯದ ಮದ್ಯ ಹಾಗೂ ಮದ್ಯ ಸಾಗಿಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡು 97 ಜನರನ್ನು ದಸ್ತಗಿರಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಂಗಳೂರು(ನ.22): ಚುನಾವಣಾ ನೀತಿ ಸಂಹಿತೆ ಜಾರಿಯಾದ ನ.11ರಿಂದ ಇದುವರೆಗೆ ಬಿಬಿಎಂಪಿ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.23 ಕೋಟಿ ಮೌಲ್ಯದ ಮದ್ಯ ಹಾಗೂ ಮದ್ಯ ಸಾಗಿಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡು 97 ಜನರನ್ನು ದಸ್ತಗಿರಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಶಿವಾಜಿನಗರ, ಮಹಾಲಕ್ಷ್ಮೇ ಲೇಔಟ್‌, ಯಶವಂತಪುರ ಮತ್ತು ಕೆ.ಆರ್‌.ಪುರ ಈ ನಾಲ್ಕು ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.11ರಿಂದ ನ.20ರ ವರೆಗೆ ಒಟ್ಟು 373 ಕಡೆ ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ 1.93 ಕೋಟಿ ಮೌಲ್ಯದ ಸಾವಿರಾರು ಲೀಟರ್‌ ಮದ್ಯ, 9.07 ಲಕ್ಷ ಮೌಲ್ಯದ ಬಿಯರ್‌ ಹಾಗೂ 1.21 ಕೋಟಿ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟಾರೆ ಮೌಲ್ಯ 3.23 ಕೋಟಿಗಳಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಮಟ್ಟದ ಚುನಾವಣಾ ನೋಡಲ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನಾಗಮಂಗಲ ಬಳಿ ಭೀಕರ ಅಪಘಾತ: ಆರು ಸಾವು, ಒಂಬತ್ತು ಮಂದಿಗೆ ಗಾಯ!

ಅಕ್ರಮ ಮದ್ಯ ಸಾಗಾಟ ಪ್ರಕರಣದಲ್ಲಿ ಮಹಾಲಕ್ಷ್ಮೇ ಲೇಔಟ್‌ ಕ್ಷೇತ್ರದಲ್ಲಿ 45 ಕಡೆ ದಾಳಿ ನಡೆಸಿ 22 ಆರೋಪಿಗಳನ್ನು, ಕೆ.ಆರ್‌.ಪುರ ಮತ್ತು ಶಿವಾಜಿನಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿ 153 ಕಡೆ ದಾಳಿ ಮಾಡಿ 29 ಮಂದಿಯನ್ನು ಹಾಗೂ ಯಶವಂತಪುರ ಕ್ಷೇತ್ರದಲ್ಲಿ 174 ಕಡೆ ದಾಳಿ ನಡೆಸಿ 46 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

BJP ಅಭ್ಯರ್ಥಿಗಳನ್ನು ಶ್ವಾನಕ್ಕೆ ಹೋಲಿಸಿ ಅವಹೇಳನಕಾರಿ ಪೋಸ್ಟ್‌

click me!