
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತಗಳು ಕೆಲವೆಡೆ ಬಿಜೆಪಿಗೆ ಬಿದ್ದಿವೆ ಎಂಬ ಸಚಿವ ಜಿ.ಟಿ.ದೇವೇಗೌಡರ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆ ಶಿವಕುಮಾರ್ ಅವರು, ನಾನು ಕಾಂಗ್ರೆಸ್‌ನ ವಕ್ತಾರನಲ್ಲ. ಕೇವಲ ಕಾರ್ಯಕರ್ತ ಹಾಗೂ ಸಚಿವ.
ನನ್ನ ಬಗ್ಗೆ ಮಾತ್ರ ನಾನು ಪ್ರತಿಕ್ರಿಯೆ ನೀಡಬಲ್ಲೆ. ಬೇರೆಯವರ ವಿಷಯಕ್ಕೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಮೈತ್ರಿ ಧರ್ಮ ಪಾಲಿಸಲೇಬೇಕು. ನಾವಂತೂ ಪಾಲನೆ ಮಾಡಿದ್ದೇವೆ. ಅವರೂ ಪಾಲಿಸಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಇನ್ನು, ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿಯವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕನಸು ಕಾಣುವವರಿಗೆ, ಕನಸಿನಲ್ಲಿ ಸಂತೋಷಪಡುತ್ತೇವೆ ಎನ್ನುವವರಿಗೆ ಬೇಡ ಅನ್ನಲು ಸಾಧ್ಯವೇ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.