‘ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಕಾನೂನು ಇಲ್ಲ’

Published : Aug 22, 2019, 10:15 AM IST
‘ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಕಾನೂನು ಇಲ್ಲ’

ಸಾರಾಂಶ

ನನಗೆ ಸಚಿವ ಸ್ಥಾನ ನೀಡಬೇಕು ಎಂದು ಯಾವುದೇ ಕಾನೂನು ಇಲ್ಲ ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ. ಬಹುತೇಕ ಮಂತ್ರಿ ಮಂಡಲಕ್ಕೆ ಸೇರುವುದು ಖಚಿತ ಎಂದೇ ಭಾವಿಸಲಾಗಿದ್ದ ಮುಖಂಡಗೆ ಸಚಿವ ಸ್ಥಾನ ತಪ್ಪಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ [ಆ.22]:  ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ ಅಂದ ತಕ್ಷಣ ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಯಾವುದೇ ಕಾನೂನು ಇಲ್ಲ!

ಹೀಗೆಂದವರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌. ದೆಹಲಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅರ್ಧವಾಗಿದೆ. ಇನ್ನೂ ಪೂರ್ಣವಾಗಿ ಆಗಬೇಕಿದೆ. ಬಿಜೆಪಿ ಸರ್ಕಾರದಲ್ಲಿ ಯಾವುದೇ ಭಿನ್ನಮತವಿಲ್ಲ. ಬಿ.ಎಸ್‌.ಯಡಿಯೂರಪ್ಪ ಸರ್ಕಾರ ತನ್ನ ಅಧಿಕಾರಾವಧಿ ಪೂರ್ಣಗೊಳಿಸಲಿದೆ ಎಂದರು. 

‘ಅತೃಪ್ತ ಪ್ರೇತಾತ್ಮಕ್ಕೆ ಸಚಿವ ಸ್ಥಾನ ನೀಡಲು ಅರ್ಹರ ಕಡೆಗಣನೆ’

ರಾಜ್ಯ ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ ಅಂದ ತಕ್ಷಣ ಸಚಿವ ಸ್ಥಾನ ಕೊಡಬೇಕು ಅಂತ ಯಾವುದೇ ಕಾನೂನು ಇಲ್ಲ. ಪಕ್ಷದ ಕಾರ್ಯಕರ್ತನಾಗಿ ನಾನು ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ ಎಂದರು. 

ಇದೇ ವೇಳೆ ಅನರ್ಹ ಶಾಸಕರ ಜತೆಗೆ ದೆಹಲಿಗೆ ಬಂದಿರುವ ವಿಚಾರವಾಗಿ ಈ ವೇಳೆ ಪತ್ರಕರ್ತರು ಪ್ರಶ್ನಿಸಿದಾಗ, ಅವರು ನಮ್ಮ ಸ್ನೇಹಿತರು. ಅವರು ಈಗ ತೊಂದರೆಯಲ್ಲಿದ್ದಾರೆ. ಅವರಿಗೆ ಮಾನಸಿಕ ಬೆಂಬಲ ಕೊಡಲು ನಾನು ಜತೆಗೆ ಬಂದಿದ್ದೇನೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!