
ಬೆಂಗಳೂರು(ಜೂ.14) : ವಂಚಕ ಐಎಂಎ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದ ಸಂತ್ರಸ್ತರೊಬ್ಬರು ಹೃದಯಾಘಾತದಿಂದ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ನಗರದ ಮೈಸೂರು ರಸ್ತೆಯ ಹಳೇಗುಡ್ಡದಹಳ್ಳಿ ನಿವಾಸಿ ಅಬ್ದುಲ್ ಪಾಷಾ (54) ಮೃತರು.ಇವರು ಬೋರ್‌ವೆಲ್ ತೆಗೆಯುವ ಕೆಲಸ ಮಾಡುತ್ತಿದ್ದರು. ಪಾಷಾಗೆ ಮೂವರು ಹೆಣ್ಣುಮಕ್ಕಳಿದ್ದು, ಇಬ್ಬರಿಗೆ ವಿವಾಹ ಮಾಡಿದ್ದಾರೆ.
ಕಿರಿಯ ಪುತ್ರಿಗೆ ವಿವಾಹ ನಿಶ್ಚಯವಾಗಿತ್ತು. ಕೆಲ ವರ್ಷಗಳ ಹಿಂದೆ ಮನ್ಸೂರ್ ಖಾನ್‌ನ ಐಎಂಎ ಸಂಸ್ಥೆಯಲ್ಲಿ ಎರಡು ಲಕ್ಷ ರು. ಹೂಡಿಕೆ ಮಾಡಿ, ತನ್ನ ಇಬ್ಬರು ಹೆಣ್ಣು ಮಕ್ಕಳಿಂದ ತಲಾ ಮೂರು ಲಕ್ಷ ರು. ಹೂಡಿಕೆ ಮಾಡಿಸಿದ್ದರು. ಮದುವೆ ಸಮಯದಲ್ಲಿ ಹಣ ಪಡೆಯಲು ಅಬ್ದುಲ್ ನಿರ್ಧರಿಸಿದ್ದರು. ಅಷ್ಟು ಹೊತ್ತಿಗೆ ಕಂಪನಿ ವಂಚನೆ ಮಾಡಿರುವುದು ಗೊತ್ತಾಗಿತ್ತು. ಕಳೆದ ಮೂರು ದಿನಗಳಿಂದ ಅಬ್ದುಲ್ ವಂಚನೆ ಆಗಿರುವ ಬಗ್ಗೆ ಸಂಬಂಧಿಕರು ಹಾಗೂ ಎಲ್ಲರ ಬಳಿ ಹೇಳಿಕೊಂಡು ನೊಂದಿದ್ದರು.
ಮಗಳ ಮದುವೆಗೆ ಕೂಡಿಟ್ಟ ಹಣ ಇಲ್ಲ ಎಂದು ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದರು. ಇದೇ ಒತ್ತಡದಲ್ಲಿ ಗುರುವಾರ ರಾತ್ರಿ 9.30ರ ಸುಮಾರಿಗೆ ಹೃದಯಾ ಘಾತವಾಗಿದೆ. ಕೂಡಲೇ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.