
ಇಸ್ಲಾಮಾಬಾದ್(ಜು.30): ಹಲವಾರು ವರ್ಷಗಳ ರಾಜಕೀಯ ಹೋರಾಟದ ನಂತರ ಮಾಜಿ ಕ್ರಿಕೆಟಿಗನ ಕನಸು ನನಸಾಗಿದೆ. 1992ರ ವಿಶ್ವಕಪ್ ಕ್ರಿಕೆಟ್ ಹೀರೋಗೆ ಪಾಕಿಸ್ತಾನದ ನೂತನ ಸಾರಥ್ಯ ವಹಿಸಲಿದ್ದಾರೆ.
ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಇಮ್ರಾನ್ ಖಾನ್ ಅವರ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪ್ರಕಟಣೆ ತಿಳಿಸಿದೆ. ಜು. 25ರಂದು ನಡೆದ ಚುನಾವಣೆಯಲ್ಲಿ ಪಿಟಿಐ ಹೆಚ್ಚು ಸ್ಥಾನಗಳಿಸಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತದ ಕೊರತೆಯಿರುವ ಕಾರಣದಿಂದ ಪಕ್ಷೇತರ ಹಾಗೂ ಇತರ ಪಕ್ಷಗಳ ಬೆಂಬಲ ಪಡೆಯುವ ಸಾಧ್ಯತೆಯಿದೆ.
ಆಗಸ್ಟ್ 11 ರಂದು ಇಮ್ರಾನ್ ಖಾನ್ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು ಇದಕ್ಕಾಗಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಪಿಟಿಐ ನಾಯಕ ನಯೀನಲ್ ಹಕ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.