
ನವದೆಹಲಿ (ಜ.12): ಭಾರತೀಯ ವಿಮಾನಯಾನ ಉದ್ಯಮದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ 6 ಆಸನಗಳನ್ನು ಮೀಸಲಿಡಲು ಭಾರತೀಯ ವಿಮಾನಯಾನ ಸಂಸ್ಥೆ ನಿರ್ಧರಿಸಿದೆ.
ದೇಶಿಯ ವಿಮಾನಗಳಲ್ಲಿ ಈ ವ್ಯವಸ್ಥೆ ಮುಂದಿನ ವಾರದಿಂದ ಜಾರಿಗೆ ಬರಲಿದೆ. ಒಬ್ಬಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗೆ ಶೌಚಾಲಯಕ್ಕೆ ಹೋಗಲು ಆಗುವ ಅನಾನುಕೂಲತೆಯನ್ನು ತಪ್ಪಿಸಲು ಎಕಾನಮಿ ಕ್ಲಾಸ್ ನ 3 ನೇ ಸಾಲಿನಲ್ಲಿ 6 ಆಸನಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಏರ್ ಇಂಡಿಯಾ ಹೇಳಿದೆ. ಜ. 18 ರಿಂದ ಇದು ಜಾರಿಗೆ ಬರಲಿದೆ.
ಕುಟುಂಬ ಸಮೇತ ಪ್ರಯಾಣ ಮಾಡುವ ಮಹಿಳೆಯರಿಗೆ ಈ ಆಸನಗಳಲ್ಲಿ ಕುಳಿತುಕೊಳ್ಳುವ ಅವಕಾಶವಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.