ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ ಮಸೂದೆಗೆ ಆಂಧ್ರ ವಿಧಾನಸಭೆ ಅಂಗೀಕಾರ!

Published : Jul 25, 2019, 10:04 AM IST
ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ ಮಸೂದೆಗೆ ಆಂಧ್ರ ವಿಧಾನಸಭೆ ಅಂಗೀಕಾರ!

ಸಾರಾಂಶ

ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ ಮಸೂದೆಗೆ ಆಂಧ್ರ ವಿಧಾನಸಭೆ ಅಂಗೀಕಾರ| ಪನಿಗಳೇ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಬೇಕು| ಪ್ರತೀ ಲೋಕಸಭಾ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ

ಅಮರಾವತಿ[ಜು.25]: ಖಾಸಗಿ ವಲಯದಲ್ಲಿಯೂ ಸ್ಥಳೀಯರಿಗೆ ಶೇ.75ರಷ್ಟುಉದ್ಯೋಗವಕಾಶ ಕಲ್ಪಿಸಲು ಅವಕಾಶ ಮಾಡಿಕೊಡುವ ಮಸೂದೆಗೆ ಆಂಧ್ರಪ್ರದೇಶ ವಿಧಾನಸಭೆ ಬುಧವಾರ ಅಂಗೀಕಾರ ನೀಡಿದೆ. ಈ ಮೂಲಕ ಇಂಥ ಮಸೂದೆ ಅಂಗೀಕರಿಸಿದ ಮೊದಲ ರಾಜ್ಯವಾಗಿ ಹೊರಹೊಮ್ಮಿದೆ.

ಉದ್ಯಮಗಳು ಹಾಗೂ ಕಾರ್ಖಾನೆಗಳ ಮಸೂದೆ-2019ರ ಅಂಗೀಕಾರದ ಪರಿಣಾಮ ಉದ್ಯಮಗಳು, ಫ್ಯಾಕ್ಟರಿಗಳು, ಜಂಟಿ ಉದ್ಯಮ ಘಟಕಗಳು ಹಾಗೂ ಸಾರ್ವಜನಿಕ ಸಹಯೋಗದಲ್ಲಿನ ಉದ್ಯಮಗಳ ನೇಮಕಾತಿಯಲ್ಲಿ ಸ್ಥಳೀಯರಿಗೆ ಶೇ.75 ಮೀಸಲಾತಿ ಕಲ್ಪಿಸಬೇಕು. ಒಂದು ವೇಳೆ ಕಾರ್ಖಾನೆ ಅಥವಾ ಉದ್ಯಮಕ್ಕೆ ಅಗತ್ಯವಿರುವ ಕೌಶಲ್ಯ ಸ್ಥಳೀಯ ಅಭ್ಯರ್ಥಿ ಬಳಿ ಇಲ್ಲದೆ ಇದ್ದಲ್ಲಿ, ಆತನಿಗೆ 3 ವರ್ಷಗಳಲ್ಲಿ ಅಗತ್ಯವಿರುವ ಕೌಶಲ್ಯದ ತರಬೇತಿ ನೀಡಬೇಕು ಎಂಬ ಅಂಶವನ್ನು ಮಸೂದೆಯಲ್ಲಿ ಸೇರಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಸಿಎಂ ಜಗನ್‌ ಮೋಹನ್‌ ರೆಡ್ಡಿ, ‘ಪ್ರತಿಯೊಂದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಇಂಜಿನಿಯರಿಂಗ್‌ ಕಾಲೇಜುಗಳ ಜೊತೆಗೂಡಿ ಯುವಕರ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು. ನಾವು ಈ ಭ್ರಷ್ಟವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತಿದ್ದು, ಯಾವೊಂದು ಉದ್ಯಮಿಗಳು ಯಾವುದೇ ಹಂತದಲ್ಲಿ ಯಾರಿಗೂ ಸಹ ಲಂಚ ನೀಡುವ ಅಗತ್ಯವಿಲ್ಲ. ಆದರೆ, ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವುದು ಮಾತ್ರವೇ ಉದ್ಯಮಗಳ ಜವಾಬ್ದಾರಿ’ ಎಂದು ಹೇಳಿದರು.

ಈ ಹಿಂದೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಸಹ ರಾಜ್ಯದ ಕೈಗಾರಿಕೆ ಘಟಕಗಳಲ್ಲಿ ಸ್ಥಳೀಯ ಯುವಕರಿಗೆ ಶೇ.70 ಮೀಸಲಾತಿ ಕಲ್ಪಿಸುವ ಕಾನೂನು ರೂಪಿಸುವುದಾಗಿ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಸಿದ್ದರಾಮಯ್ಯರಿಂದ ರಾಜ್ಯದ ದಲಿತರ ಸರ್ವನಾಶ: ಮಾಜಿ ಸಂಸದ ಪ್ರತಾಪ್ ಸಿಂಹ
Karnataka News Live:4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲಲ್ಲಿ ಎಲೆಕ್ಷನ್