ಮತದಾನದಕ್ಕೂ ಮುನ್ನವೇ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳು

Published : Mar 27, 2019, 11:54 AM ISTUpdated : Mar 27, 2019, 11:57 AM IST
ಮತದಾನದಕ್ಕೂ ಮುನ್ನವೇ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳು

ಸಾರಾಂಶ

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ರಾಜ್ಯಗಳಲ್ಲಿಯೂ ಕೂಡ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೀಗ  2 ಕ್ಷೇತ್ರಗಳಲ್ಲಿ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಇಟಾನಗರ್‌:  ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಕೆಲ ರಾಜ್ಯಗಳಲ್ಲಿಯೂ ಕೂಡ ಚುನಾವಣೆ ನಡೆಯಲಿದೆ. ಇನ್ನು ವಿಧಾನಸಭೆ ಚುನಾವಣೆಗೆ ಒಂದು ಕ್ಷೇತ್ರಕ್ಕೆ ಕನಿಷ್ಠವೆಂದರೂ 10ರಿಂದ 15 ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ.

ತೀರಾ ಅಪರೂಪ ಎಂಬಂತೆ ಅರುಣಾಲ ಪ್ರದೇಶದಲ್ಲಿ ಏ.11ರಂದು ಚುನಾವಣೆ ನಿಗದಿಯಾಗಿರುವ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಆಲೋ ಪೂರ್ವ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಕೆಂಟೊ ಜಿನಿ ಮತ್ತು ಯಾಚುಲಿ ಕ್ಷೇತ್ರದ ತಾಬಾ ತೆದಿರ್‌ ಅವರ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆ ಆಗಿಲ್ಲ. ಅರುಣಾಚಲ ಪ್ರದೇಶದ 60 ವಿಧಾನಸಭಾ ಕ್ಷೇತ್ರಗಳಿಗೆ ಲೋಕಸಭೆಯ ಜೊತೆಗೆ ಏ.11ರಂದು ಚುನಾವಣೆ ನಿಗದಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ
ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು