
ಚೆನ್ನೈ: ಪ್ರಸಿದ್ಧ ನಟರಾದ ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರ ರಾಜಕೀಯ ಪ್ರವೇಶದಿಂದ ತಮಿಳುನಾಡಿನ ರಾಜಕಾರಣ ದಿನೇದಿನೇ ರಂಗೇರುತ್ತಿದೆ. ಗಣರಾಜ್ಯೋತ್ಸವ ದಿನವಾದ ಜ.26ರಿಂದ ಕಮಲ್ ಹಾಸನ್ ಅವರು ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ಅಲ್ಲದೆ, ಭ್ರಷ್ಟಾಚಾರ ಬಯಲಿಗೆಳೆಯುವವರಿಗಾಗಿ ಮೊಬೈಲ್ ಆ್ಯಪ್‌ವೊಂದನ್ನು ಇದೇ ತಿಂಗಳು ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ.
ಜ.26ರಿಂದ ಜನರನ್ನು ಭೇಟಿ ಮಾಡುವ ಪ್ರಯಾಣ ಆರಂಭವಾಗಲಿದೆ. ಕಾರ್ಯಕ್ರಮ ಪಟ್ಟಿಯ ಕುರಿತ ಮಾಹಿತಿ ‘ಆನಂದ ವಿಕಟನ್’ ವಾರಪತ್ರಿಕೆಯ ಮುಂದಿನ ಸಂಚಿಕೆಯಲ್ಲಿ ಲಭ್ಯವಿರುತ್ತದೆ ಎಂದು ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಕಮಲ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.