
ನವದೆಹಲಿ (ಜೂ.08); ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ನಿನ್ನೆ ನಡೆದ ಫೈರಿಂಗ್’ನಲ್ಲಿ ಐವರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮಂಡಸೌರ್’ನಲ್ಲಿ ಸೆಕ್ಷನ್ 151 ಹೇರಲಾಗಿದೆ. ಇಂದು ಸ್ಥಳಕ್ಕೆ ರಾಹುಲ್ ಗಾಂಧಿ ಧಾವಿಸಿದ್ದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ.
ಬಂಧನಕ್ಕೆ ಕಾರಣವನ್ನು ತಮಗೆ ನೀಡಿಲ್ಲವೆಂದು ರಾಹುಲ್ ಗಾಂಧಿ ಮಾಧ್ಯಮಗಳಿಗೆ ಹೇಳಿದ್ದಾರೆ. ನನಗೆ ಇದೇ ರೀತಿ ಉತ್ತರ ಪ್ರದೇಶದಲ್ಲಿಯೂ ಕೂಡಾ ಆಗಿತ್ತು ಎಂದಿದ್ದಾರೆ.
ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ರೈತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನಡೆಸುತ್ತಿರುವ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು ನಿನ್ನೆ ನಡೆದ ಪೈರಿಂಗ್ ನಲ್ಲಿ ಐವರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ರಾಹುಲ್ ಗಾಂಧಿ ಧಾವಿಸಲು ಮುಂದಾಗಿದ್ದಾರೆ. ಪೊಲೀಸರು ಅವರನ್ನು ತಡೆಗಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.