ಹೊಸ ಕಾಶ್ಮೀರ, ಹೊಸ ಸ್ವರ್ಗ: ಪ್ರಧಾನಿ ಮೋದಿ ಭರವಸೆ!

Published : Sep 19, 2019, 04:45 PM IST
ಹೊಸ ಕಾಶ್ಮೀರ, ಹೊಸ ಸ್ವರ್ಗ: ಪ್ರಧಾನಿ ಮೋದಿ ಭರವಸೆ!

ಸಾರಾಂಶ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಮಹಾರಾಷ್ಟ್ರ| ಮಹಾರಾಷ್ಟ್ರದಲ್ಲಿ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ ಪ್ರಧಾನಿ ಮೋದಿ| ನಾಶಿಕ್'ನಲ್ಲಿ ಭರ್ಜರಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ| ಇದೇ ಮೊದಲ ಬಾರಿಗೆ ಬಹಿರಂಗವಾಗಿ ಜಮ್ಮು ಮತ್ತು ಕಾಶ್ಮೀರ ವಿಚಾರ ಪ್ರಸ್ತಾಪ| ಹೊಸ ಕಾಶ್ಮೀರ ನಿರ್ಮಾಣಕ್ಕೆ ಕರೆ ನೀಡಿದ ಪ್ರಧಾನಿ ಮೋದಿ| 'ಕಾಶ್ಮೀರ ಜನತೆ ಹಾಗೂ ಕೇಂದ್ರ ಸರ್ಕಾರದ ನಡುವೆ ನೇರ ಸಂಪರ್ಕ'| ಕಾಶ್ಮೀರದಲ್ಲಿ ಹೊಸ ಅಭಿವೃದ್ಧಿ ಪರ್ವ ಆರಂಭಿಸುವ ವಾಗ್ದಾನ ನೀಡಿದ ಪ್ರಧಾನಿ|

ನಾಶಿಕ್(ಸೆ.19): ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಮಹಾರಾಷ್ಟ್ರದಲ್ಲಿ ತಮ್ಮ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿರುವ ಪ್ರಧಾನಿ ಮೋದಿ, ಇಂದು ನಾಶಿಕ್'ನಲ್ಲಿ ಭರ್ಜರಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದರು.

ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ಹೊಸ ಕಾಶ್ಮೀರ ನಿರ್ಮಾಣದ ವಾಗ್ದಾನ ನೀಡಿದರು.

ನಾವೆಲ್ಲಾ ಹೊಸ ಕಾಶ್ಮೀರ ನಿರ್ಮಾಣಕ್ಕೆ ಸಿದ್ಧರಾಗಬೇಕಿದ್ದು, ಹೊಸ ಸ್ವರ್ಗವನ್ನು ಸೃಷ್ಟಿಸುವ ಸವಾಲನ್ನು ಸ್ವೀಕರಿಸಬೇಕಿದೆ ಎಂದು ಮೋದಿ ಜನತೆಗೆ ಕರೆ ನೀಡಿದರು.

ಆರ್ಟಿಕಲ್ 370ರ ರದ್ದತಿಯನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಅಬ್ ಮಿಲ್‌ಕರ್ ಏಕ್ ನಯಾ ಕಾಶ್ಮೀರ ಬನಾನಾ ಹೈ(ನಾವೆಲ್ಲಾ ಜೊತೆಯಾಗಿ ಹೊಸ ಕಾಶ್ಮೀರದ ನಿರ್ಮಾಣ ಮಾಡಬೇಕಿದೆ) ಎಂದು ಹೇಳಿದರು.

370ನೇ ವಿಧಿ ರದ್ದತಿಯಿಂದಾಗಿ ಕಾಶ್ಮೀರ ಜನತೆ ಹಾಗೂ ಕೇಂದ್ರ ಸರ್ಕಾರದ ನಡುವೇ ಇದೀಗ ನೇರ ಸಂಪರ್ಕ ಏರ್ಪಟ್ಟಿದ್ದು, ಕಣಿವೆಯಲ್ಲಿ ಅಭಿವೃದ್ಧಿಯ ಹೊಸ ಪರ್ವ ಶುರುವಾಗಲಿದೆ ಎಂದು ಮೋದಿ ಭರವಸೆ ನೀಡಿದರು.

ಇದೇ ವೇಳೆ ರಾಮ ಮಂದಿರ ನಿರ್ಮಾಣದ ಕುರಿತು ಮನಬಂದಂತೆ ಹೇಳಿಕೆ ನೀಡುತ್ತಿರುವವರ ವಿರುದ್ಧ ಹರಿಹಾಯ್ದಿರುವ ಪ್ರಧಾನಿ ಮೋದಿ, ವಿವಾದ ಸುಪ್ರೀಂಕೋರ್ಟ್'ನಲ್ಲಿರುವಾಗ ಈ ವಿಷಯದ ಕುರಿತು ಹೇಳಿಕೆ ನೀಡುವುದು ಸಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!