ಮೋದಿ ವಿರುದ್ಧ ನಿಂತ್ರಾ ಸ್ವಾಮಿ?: 'ಗಂಭೀರ' ಎಚ್ಚರಿಕೆ!

By Web DeskFirst Published Sep 22, 2018, 4:01 PM IST
Highlights

ರಫೆಲ್ ಒಪ್ಪಂದ ಕುರಿತ ಫ್ರಾನ್ಸ್ ಮಾಜಿ ಅಧ್ಯಕ್ಷರ ಹೇಳಿಕೆ! ಕೇಂದ್ರ ಸರ್ಕಾರಕ್ಕೆ ಗಂಭೀರ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ! ಹೊಲಾಂಡೆ ಹೇಳಿಕೆ ನಿಜವಾಗಿದ್ದಲ್ಲಿ ಅವರ ಹೇಳಿಕೆ ಗಂಭೀರ ಸ್ವರೂಪದ್ದು! ರಫೆಲ್ ಒಪ್ಪಂದದಲ್ಲಿ ಮೋದಿ ಸರ್ಕಾರದ ವಿರುದ್ಧ ಸ್ವಾಮಿ ಧ್ವನಿ?

ನವದೆಹಲಿ(ಸೆ.22): ರಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 

ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲಾಂಡೆ ಫ್ರಾನ್ಸ್-ಭಾರತದ ನಡುವೆ ನಡೆದಿರುವ ಒಪ್ಪಂದಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗಳು ಗಂಭೀರವಾಗಿವೆ ಎಂದು ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

Cc Dr https://t.co/gvEaUEvvdx

— Zoom Indian Media (@ZoomIndianMedia)

ಮಾಜಿ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲಾಂಡೆ ನೀಡಿರುವ ಹೇಳಿಕೆ ನಿಜವಾಗಿದ್ದಲ್ಲಿ ಅವು ಖಂಡಿತ ಗಂಭೀರ ಹೇಳಿಕೆಗಳಾಗಿವೆ ಎಂದು ಸ್ವಾಮಿ ಹೇಳಿದ್ದಾರೆ. ಈ ಕುರಿತುಟ್ವೀಟ್ ಮಾಡಿರುವ ಸ್ವಾಮಿ, ಇದನ್ನು ನಿಖರವಾಗಿ ವರದಿ ಮಾಡಿರುವುದೇ ಆದರೆ ಗಂಭೀರ ಸ್ವರೂಪದ ಹೇಳಿಕೆಗಳಿವು ಎಂದು ಅಭಿಪ್ರಾಯಟ್ಟಿದ್ದಾರೆ.

ರಫೆಲ್ ಡೀಲ್: ಮೋದಿಗೆ ಮುಜುಗರ ತಂದಿತ್ತ ಫ್ರಾನ್ಸ್ ಮಾಜಿ ಅಧ್ಯಕ್ಷ!

ಅಂಬಾನಿ ಬೇಕೆಂದಿದ್ದು ನಾವೇ: ಡಸ್ಸಾಲ್ಟ್ ಕಂಪನಿ ಸ್ಪಷ್ಟನೆ!

ಮೋದಿ-ಅಂಬಾನಿಯಿಂದ ರಕ್ಷಣಾ ಪಡೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್: ರಾಹುಲ್!

click me!