
ಲಖನೌ(ಮಾ.11): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮಣಿಸಲು ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಹೋರಾಟ ನಡೆಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂ ಅವರಿಗೆ ಸ್ವಕ್ಷೇತ್ರದಲ್ಲೂ ತೀವ್ರ ಮುಖಭಂಗವಾಗಿದೆ. ರಾಹುಲ್ ಅವರು ಪ್ರತಿನಿಸುತ್ತಿರುವ ಅಮೇಠಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಗಳಿಸಲೂ ವಿಫಲವಾಗಿದೆ.
ಅಮೇಠಿ ಕ್ಷೇತ್ರ ವ್ಯಾಪ್ತಿಯಲ್ಲಿ ಐದು ಕ್ಷೇತ್ರಗಳು ಬರುತ್ತವೆ. ಆ ಪೈಕಿ ನಾಲ್ಕರಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದರೆ, ಒಂದರಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್- ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಏರ್ಪಟ್ಟಿತ್ತಾದರೂ ಅಮೇಠಿ ವ್ಯಾಪ್ತಿಯ ಗೌರಿಗಂಜ್‌ನಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಅಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ.
ಇನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂ ಪ್ರತಿನಿಸುವ ರಾಯ್‌ಬರೇಲಿ ವ್ಯಾಪ್ತಿಯ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ 2, ಬಿಜೆಪಿ 2 ಹಾಗೂ ಸಮಾಜವಾದಿ ಪಕ್ಷ ಒಂದು ಸ್ಥಾನದಲ್ಲಿ ಗೆದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.