ಜಾರ್ಜ್ ನಿರ್ದೋಷಿ, ಸಂಪುಟಕ್ಕೆ ಸೇರಿಸಿಕೊಳ್ಳಬೇಕು: ಸಚಿವ ಎಚ್.ಕೆ.ಪಾಟೀಲ್

Published : Sep 18, 2016, 02:55 PM ISTUpdated : Apr 11, 2018, 12:56 PM IST
ಜಾರ್ಜ್ ನಿರ್ದೋಷಿ, ಸಂಪುಟಕ್ಕೆ ಸೇರಿಸಿಕೊಳ್ಳಬೇಕು: ಸಚಿವ ಎಚ್.ಕೆ.ಪಾಟೀಲ್

ಸಾರಾಂಶ

ಬೆಳಗಾವಿ (ಸೆ.18): ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್’ಗೆ ಕ್ಲೀನ್​ಚಿಟ್​ ಸಿಕ್ಕಿರುವ ಹಿನ್ನೆಲೆಯಲ್ಲಿ, ಅವರನ್ನು ವಾಪಸು ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಬೇಕೆಂದು  ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಕೇಳಿ ಬಂದುದರಿಂದ ಅವರು ಸಚಿವ ಸಂಪುಟಕ್ಕೆ ರಾಜಿನಾಮೆ ಕೊಟ್ಟಿದ್ದರು.

ಜಾರ್ಜ್ ನಿರ್ದೋಷಿಯಾಗಿರುವುದರಿಂದ ಸಂಪುಟ ಸೇರುವ ನೈತಿಕ ಹಕ್ಕು ಇದೆ. ಅವರನ್ನು ಸಂಪುಟಕ್ಕೆ ಸೇರಿಸಿ, ಸಚಿವ ಸ್ಥಾನ ನೀಡುವ ನೈತಿಕ ಜವಾಬ್ದಾರಿ ಪಕ್ಷದ ಮೇಲಿದೆ  ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

ಕರ್ನಾಟಕ - ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಬಗ್ಗೆ ಜನರು ಆತಂಕ ಪಡಬೇಕಿಲ್ಲ , ಸರ್ಕಾರ ಗಡಿ ವಿಚಾರದಲ್ಲಿ ಎಲ್ಲ ರೀತಿಯ ಎಚ್ಚರಿಕೆ ವಹಿಸಿದೆ   ಎಂದು ಹೇಳಿರುವ ಪಾಟೀಲ್, ಬೆಂಗಳೂರು ಕಾವೇರಿ ಗಲಾಟೆಯಲ್ಲಿ ಆರೆಸ್ಸೆಸ್ ಕೈವಾಡದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

HD Kumaraswamy birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ