
ನವದೆಹಲಿ[ನ.24]: ಕೆಲ ದಿನಗಳ ಹಿಂದೆ ಕೇರಳದಲ್ಲಿ ಉಂಟಾದ ದಿಢೀರ್ ಪ್ರವಾಹಕ್ಕೆ ಅಣೆಕಟ್ಟೆಗಳಿಂದ ಏಕಾಏಕಿ ನೀರು ಬಿಟ್ಟಿದ್ದು ಹಾಗೂ ನದಿಗಳಲ್ಲಿ ನೀರಿನ ಮಟ್ಟಹೆಚ್ಚಾಗಿದ್ದೇ ಕಾರಣ ಎಂದು ಹೇಳಲಾಗಿತ್ತು. ಹೀಗಾಗಿ ಭವಿಷ್ಯದಲ್ಲಿ ಇಂತಹ ಸನ್ನಿವೇಷಗಳು ಉದ್ಭವಿಸದಂತೆ ತಡೆಯಲು ಭಾರೀ ಮಳೆಯಿಂದ ನದಿ ಹಾಗೂ ಜಲಾಶಗಳಲ್ಲಿ ಏಕಾಏಕಿ ನೀರಿನ ಮಟ್ಟಹೆಚ್ಚಾದ ಸಂದರ್ಭದಲ್ಲಿ ಆ ಬಗ್ಗೆ ಮಾಹಿತಿ ನೀಡುವ ತಂತ್ರಜ್ಞಾನವೊಂದನ್ನು ಭಾರತೀಯ ಹವಾಮಾನ ಇಲಾಖೆ ಅಭಿವೃದ್ಧಿಪಡಿಸಿದೆ.
ಇದರಿಂದ ಮಳೆ ಪರಿಣಾಮಗಳ ಬಗ್ಗೆ ಸೂಕ್ಷ್ಮವಾಗಿ ಅವಲೋಕಿಸಲು ರಾಜ್ಯ ಸರ್ಕಾರಗಳಿಗೆ ನೆರವಾಗಲಿದೆ. ‘ಪರಿಣಾಮ ಆಧಾರಿತ ಮುನ್ಸೂಚನೆ ಕ್ರಮ’ ಎಂಬ ತಂತ್ರಜ್ಞಾನ ಇದಾಗಿದ್ದು, ಘಟನೆಯ ಪೂರ್ವ ಸನ್ನಿವೇಶವನ್ನು ತೋರಿಸಲಿದೆ. ಇದರಿಂದ ಅಧಿಕಾರಿಗಳಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹವಾಮಾನ ಇಲಾಖೆ ಮುಖ್ಯಸ್ಥ ಕೆ.ಜೆ. ರಮೇಶ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ