ಏರುತ್ತಿದೆ ಭಾರತದ ಎತ್ತರ: ವಿಶ್ವಸಂಸ್ಥೆಯಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳುವತ್ತ ಭಾರತ!

Published : Oct 13, 2018, 12:15 PM ISTUpdated : Oct 13, 2018, 12:28 PM IST
ಏರುತ್ತಿದೆ ಭಾರತದ ಎತ್ತರ: ವಿಶ್ವಸಂಸ್ಥೆಯಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳುವತ್ತ ಭಾರತ!

ಸಾರಾಂಶ

ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಆಯ್ಕೆಯಾದ ಭಾರತ! ಅತ್ಯಧಿಕ ಮತ ಪಡೆದು ಮಂಡಳಿ ಸದಸ್ಯತ್ವ ಪಡೆದ ಭಾರತ! ಭಾರತಕ್ಕೆ ಮಂಡಳಿಗೆ ಐದನೇ ಬಾರಿಗೆ ಆಯ್ಕೆಯಾದ ಶ್ರೇಯ! ಒಟ್ಟು 188 ಮತಗಳನ್ನು ಪಡೆದುಕೊಂಡ ಭಾರತ! ಏಷ್ಯಾ-ಫೆಸಿಪಿಕ್ ಭಾಗದಲ್ಲಿ ಮಾನವ ಹಕ್ಕು ಪ್ರಚಾರ ಮತ್ತು ಮೇಲ್ವಿಚಾರಣೆ

ನ್ಯೂಯಾರ್ಕ್(ಅ.13): ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಪಡೆಯುವ ಎಲ್ಲಾ ಅರ್ಹತೆ ಹೊಂದಿರುವ ಭಾರತ, ತನ್ನ ಹಕ್ಕು ಪಡೆಯುವಲ್ಲಿ ದೃಢವಾದ ಹೆಜ್ಜೆ ಇಡುತ್ತಿದೆ ಎಂಬುದು ವಿಶ್ವಕ್ಕೆ ಗೊತ್ತಿರುವ ಸಂಗತಿ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ವಿಶ್ವಸಂಸ್ಥೆಯಲ್ಲಿ ತನ್ನ ಪ್ರಭಾವ ಹೆಚ್ಚಿಸಿಕೊಂಡಿರುವ ಭಾರತ, ಸದ್ಯ ವಿಶ್ವ ಸಂಸ್ಥೆಯ ಮಾನವ ಹಕ್ಕು ಮಂಡಳಿಗೆ ಆಯ್ಕೆಯಾಗುವ ಮೂಲಕ ತನ್ನ ಶಕ್ತಿ ವೃದ್ಧಿಸಿಕೊಂಡಿದೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಆಯ್ಕೆಯಾಗಿದೆ. ಕಣದಲ್ಲಿದ್ದ 18 ರಾಷ್ಟ್ರಗಳ ಪೈಕಿ ಅತ್ಯಧಿಕ ಮತಗಳನ್ನು ಪಡೆದ ಭಾರತವು, ಮಾನವ ಹಕ್ಕುಗಳ ಪ್ರಚಾರ ಮತ್ತು ಮೇಲ್ವಿಚಾರಣೆ ನಡೆಸುವ ಮಂಡಳಿಗೆ ಐದನೇ ಬಾರಿಗೆ ಆಯ್ಕೆಯಾದ ಶ್ರೇಯಕ್ಕೆ ಪಾತ್ರವಾಗಿದೆ.

ವಿಶ್ವ ಸಂಸ್ಥೆ ಮಾನವ ಹಕ್ಕುಗಳ ಮಂಡಳಿಗೆ ನಿನ್ನೆ ನಡೆದ ಮತದಾನ ವೇಳೆ 193 ಸದಸ್ಯ  ರಾಷ್ಟ್ರಗಳು ಮತ ಚಲಾಯಿಸಿದವು. ಭಾರತವು ಒಟ್ಟು 188 ಮತಗಳನ್ನು ಪಡೆದುಕೊಂಡಿತು. ಬಾಂಗ್ಲಾದೇಶ 178 ಮತ ಪಡೆಯಿತು. ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂಬ ಸಣ್ಣ ಕೂಗಿಗೆ ಈ ಮೂಲಕ ದಿಟ್ಟ ಉತ್ತರ ನೀಡಿರುವ ಭಾರತ, ಮಾನವ ಹಕ್ಕು ರಕ್ಷಣೆಯಲ್ಲಿ ಭಾರತದ ಪಾತ್ರವನ್ನು ನಿರಾಕರಿಸುವಂತಿಲ್ಲ ಎಂದು ವಿಶ್ವಕ್ಕೆ ಸಂದೇಶ ಕಳುಹಿಸಿದೆ.

ಇತ್ತೀಚಿಗಷ್ಟೇ 7 ರೋಹಿಂಗ್ಯಾಗಳನ್ನು ಭಾರತದಿಂದ ಗಡಿಪಾರು ಮಾಡುವ ಕೇಂದ್ರದ ನಿರ್ಧಾರದಿಂದ ವಿಶ್ವಸಂಸ್ಥೆ ಕೊಂಚ ಅಸಮಾಧಾನಗೊಂಡಿದ್ದು ಹೌದಾದರೂ. ವಿಶ್ವ ಶಾಂತಿ ಮತ್ತು ಮಾನವ ಹಕ್ಕುಗಳ ರಕ್ಷಣೆಯಲ್ಲಿ ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದೆ.

ಸದ್ಯ 47 ಸದಸ್ಯ ಬಲದ ಮಂಡಳಿಗೆ ಭಾರತವು ಜನವರಿಯಲ್ಲಿ ಸೇರ್ಪಡೆಯಾಗಲಿದ್ದು, ಏಷ್ಯಾ-ಫೆಸಿಪಿಕ್ ಭಾಗದ ಚೀನಾ, ನೇಪಾಳ, ಹಾಗೂ ಪಾಕಿಸ್ತಾನ ಜೊತೆಗೆ ಮುಂದಿನ ಮೂರು ವರ್ಷಗಳ ಅವಧಿಗೆ ಕಾರ್ಯನಿರ್ವಹಿಸಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: ವರನಿಗೆ ರಜೆ ಸಿಗದ ಕಾರಣ ವಿಡಿಯೋ ಮೂಲಕ ಅದ್ಧೂರಿ ನಿಶ್ಚಿತಾರ್ಥ! ಫೋಟೋ ಇಲ್ಲಿವೆ ನೋಡಿ
ಕಡಿಮೆ ಬಿಯರ್ ಉತ್ಪಾದನೆಗೆ ಯುಬಿ ಕಂಪನಿಗೆ ವಿಧಿಸಿದ್ದ 29 ಕೋಟಿ ರೂ. ದಂಡ ರದ್ದು!